ADVERTISEMENT

ಚನ್ನರಾಯಪಟ್ಟಣ | ಕಾನೂನು ಚೌಕಟ್ಟಿನೊಳಗೆ ಅರ್ಜಿ ಇತ್ಯರ್ಥ: ಸಚಿವ ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 2:12 IST
Last Updated 12 ನವೆಂಬರ್ 2025, 2:12 IST
ಚನ್ನರಾಯಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರು ಆಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಸಲ್ಲಿಸಿದರು. ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಪಟೆಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಮೊಹಮ್ಮದ್ ಸುಜೀತಾ ಭಾಗವಹಿಸಿದ್ದರು 
ಚನ್ನರಾಯಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರು ಆಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಸಲ್ಲಿಸಿದರು. ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಪಟೆಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಮೊಹಮ್ಮದ್ ಸುಜೀತಾ ಭಾಗವಹಿಸಿದ್ದರು    

ಚನ್ನರಾಯಪಟ್ಟಣ: ಜನಸ್ಪಂದನಾ ಸಭೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಸಾಧ್ಯವಿರುವ ಮಟ್ಟಿಗೆ ಅರ್ಜಿಗಳನ್ನು ಪರಿಶೀಲಿಸಿ ಬಗೆಹರಿಸಲಾಗುವುದು. ಇನ್ನು ಕೆಲವು ಅರ್ಜಿಗಳನ್ನು ಬಗೆಹರಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು.

ಜನರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ತಕ್ಷಣ ಪರಿಹಾರ ಸಿಗದಿದ್ದರೆ ಜನತೆ ನಿರಾಶರಾಗುವುದು ಬೇಡ. ಮುಂದೊಂದು ದಿನ ಅದಕ್ಕೆ ಪರಿಹಾರ ಸಿಗಲಿದೆ. ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಿ ಇತ್ಯರ್ಥ ಪಡಿಸಬೇಕಾಗುತ್ತದೆ ಎಂದರು.

ADVERTISEMENT

ಜನರಿಂದ ಸಲ್ಲಿಕೆಯಾಗುವ ಅರ್ಜಿಗಳನ್ನು ಸಾಫ್ಟ್‌ವೇರ್‌ಗೆ ನೋಂದಾಯಿಸಲಾಗುವುದು. ಜನರಿಂದ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ 90ರಷ್ಟು ಅರ್ಜಿಗಳನ್ನು 30 ದಿನದಲ್ಲಿ ವಿಲೇವಾರಿ ಮಾಡಲಾಗುವುದು. ಕೆಲ ಅರ್ಜಿಗಳ ವಿಲೇವಾರಿ ತಡವಾಗಬಹುದು. ಅರ್ಜಿಗಳಿಗೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದರು.

ಹಾಸನ ಬಿಟ್ಟರೆ ಅತ್ಯಂತ ಹೆಚ್ಚು ಅರ್ಜಿಗಳು ಚನ್ನರಾಯಪಟ್ಟಣದಲ್ಲಿ ಸಲ್ಲಿಕೆಯಾಗಿವೆ ಎಂದ ಅವರು, ಜಿಲ್ಲೆಯಲ್ಲಿ ಜಮೀನಿಗೆ ಸಂಬಂಧಿಸಿದಂತೆ 12 ಸಾವಿರ ಪೋಡಿ ದುರಸ್ತಿ ಮಾಡಲಾಗಿದೆ. ಈ ಹಿಂದಿನ 5 ವರ್ಷದಲ್ಲಿ ಕೇವಲ 500 ಪೋಡಿ ದುರಸ್ತಿ ಮಾಡಲಾಗಿತ್ತು. ಮುಂಬರುವ ದಿನಗಳಲ್ಲಿ 25 ಸಾವಿರ ದುರಸ್ತಿ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್‌. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ತಹಶೀಲ್ದಾರ್ ಕೆ.ಎಸ್. ಶಂಕರಪ್ಪ, ಅರಣ್ಯಾಧಿಕಾರಿ ಸೌರಭ್‍ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಭಾಗವಹಿಸಿದ್ದರು.

ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವುಗೊಳಿಸಿ. ವಸತಿ ಪ್ರದೇಶಗಳಿಗೆ ಕುರಿತಂತೆ ದಾಖಲೆ ಇರುವುದು ಮತ್ತು ಇಲ್ಲದಿರುವ ಬಗ್ಗೆ ತಹಶೀಲ್ದಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಬೇಕು
ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.