ADVERTISEMENT

ಜಾವಗಲ್: ಜಾವಗಲ್ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 6:36 IST
Last Updated 4 ಡಿಸೆಂಬರ್ 2025, 6:36 IST
ಬೆಂಗಳೂರಿನ ವಿಧಾನಸೌಧದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಜಾವಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಧರ್ಮೇಗೌಡ ಹಾಗೂ ಪಿಡಿಒ ರವಿಯವರಿಗೆ ಸಚಿವ ಪ್ರಿಯಾಂಕ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ  ಪ್ರದಾನ ಮಾಡಿದರು
ಬೆಂಗಳೂರಿನ ವಿಧಾನಸೌಧದಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ಜಾವಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಧರ್ಮೇಗೌಡ ಹಾಗೂ ಪಿಡಿಒ ರವಿಯವರಿಗೆ ಸಚಿವ ಪ್ರಿಯಾಂಕ ಖರ್ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ  ಪ್ರದಾನ ಮಾಡಿದರು   

ಜಾವಗಲ್: ‘ಪಂಚಾಯಿಗೆ ಸತತ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ’ ಎಂದು ಜಾವಗಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ತಿಳಿಸಿದರು.

ಜನಪರ ಚಟುವಟಿಕೆಗಳ ಅನುಷ್ಠಾನ, ಕರ ವಸೂಲಾತಿ, ಹಾಗೂ ಗ್ರಾಮ ಅಭಿವೃದ್ಧಿ ಸೇರದಂತೆ ವಿವಿಧ ಕೆಲಸಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ ಪ್ರಯುಕ್ತ  2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ ಎಂದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗ್ರಾಮಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸೇರಿದಂತೆ ಆರ್ ಡಿ ಪಿ ಆರ್ ಇಲಾಖೆಯ ಅಧಿಕಾರಿಗಳು ಜಾವಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರ ಧರ್ಮೇಗೌಡ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರವಿಯವರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು.

ADVERTISEMENT

 ಇಲಾಖೆಯ ಹಿರಿಯ ಅಧಿಕಾರಿಗಳಾದ ಅರುಂಧತಿ ಚಂದ್ರಶೇಖರ್, ಸಮೀರ್ ಶುಕ್ಲ, ಶಾಸಕರಾದ ನಾರಾಯಣಸ್ವಾಮಿ, ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.