ಜಾವಗಲ್: ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಗೆಲುವು ಸಾಧಿಸಿದರು.
ಭಾನುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಗಿರೀಶ್, ತಿಮ್ಮೇಗೌಡ, ಪಾಪಣ್ಣ, ಲೋಕೇಶ್, ವಿಶ್ವನಾಥ್, ಹಿಂದುಳಿದ ವರ್ಗ ‘ಎ’ ಮೀಸಲು ಕ್ಷೇತ್ರದಿಂದ ಸಿದ್ದಪ್ಪ ಶೆಟ್ಟಿ, ಮಹಿಳಾ ಮೀಸಲು ಕ್ಷೇತ್ರದಿಂದ ಯಶೋಧಮ್ಮ, ಜ್ಯೋತಿ, ಸಾಲಗಾರರಲ್ಲದ ಕ್ಷೇತ್ರದಿಂದ ದಿವಾಕರ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರದಿಂದ ಗೋವಿಂದಸ್ವಾಮಿ ಮತ್ತು ಮೋಹನ್ ಕುಮಾರ್ ಗೆಲುವು ಸಾಧಿಸಿದ್ದಾರೆ’ ಎಂದು ಚುನಾವಣಾ ಅಧಿಕಾರಿ ದೇವರಾಜ್ ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ದೇವರಾಜ್ ಮಾತನಾಡಿ, ‘ಸಹಕಾರ ಸಂಘವು ಷೇರುದಾರರು, ರೈತರು ಹಾಗೂ ನಿರ್ದೇಶಕರ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು ನೂತನವಾಗಿ ಆಯ್ಕೆಯಾದ ನಿರ್ದೇಶಕರು ಸಹಕಾರ ತತ್ವದ ಆಧಾರದ ಮೇಲೆ ಪ್ರತಿಯೊಬ್ಬ ಷೇರುದಾರ ಹಾಗೂ ರೈತರ ವಿಶ್ವಾಸವನ್ನು ಗಳಿಸುವ ಮೂಲಕ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.
ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್, ಸಿಬ್ಬಂದಿ ವೆಂಕಟೇಶ್, ಶೋಭಾ, ರುದ್ರೇಶ್, ಭರತ್, ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.