ADVERTISEMENT

ಜಾವಗಲ್: ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 2:17 IST
Last Updated 9 ನವೆಂಬರ್ 2025, 2:17 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಜಾವಗಲ್: ಹೋಬಳಿಯ ಉಂಡಿಗನಾಳು ಗ್ರಾಮದಲ್ಲಿ ಕುರಿಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ಗ್ರಾಮದ ಗಿರೀಶ್ ಅವರ ಪುತ್ರ ಸೃಜನ್ (13) ಹಾಗೂ ಶಿವಕುಮಾರ್ ಅವರ ಪುತ್ರ ವಿಜಯ್ ಕುಮಾರ್ (13) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಇಬ್ಬರೂ ಉಂಡಿಗನಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಶಾಲೆಯಲ್ಲಿ ಆಯೋಜಿಸಿದ್ದ ಕನಕ ಜಯಂತಿಯ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದಿದ್ದ ಇಬ್ಬರೂ, ಕುರಿಗಳನ್ನು ಕೆರೆಯಲ್ಲಿ ಸ್ನಾನ ಮಾಡಿಸಿಕೊಂಡು ಬರುವುದಾಗಿ ತಿಳಿಸಿ ಗ್ರಾಮದ ಹೊಸಳ್ಳಿ ಕೆರೆಗೆ ಹೋಗಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ADVERTISEMENT

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದರು. ಅರಸೀಕೆರೆ ತಹಶೀಲ್ದಾರ್ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.