ADVERTISEMENT

ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧೆ: ಎಚ್.ಕೆ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 15:29 IST
Last Updated 20 ಮಾರ್ಚ್ 2021, 15:29 IST
ಎಚ್.ಕೆ.ಕುಮಾರಸ್ವಾಮಿ
ಎಚ್.ಕೆ.ಕುಮಾರಸ್ವಾಮಿ   

ಹಾಸನ: ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ
ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ
ತಿಳಿಸಿದರು.

ಸಕಲೇಶಪುರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆಡಳಿತ ಪಕ್ಷದ ಅಭ್ಯರ್ಥಿಗಳು ಗೆಲುವಿನ ನಗೆ ಬೀರೋದು ಸಹಜ. ಕ್ಷೇತ್ರ ಅಭಿವೃದ್ಧಿ ಆಗಬಹುದು ಎಂಬ ಕಾರಣಕ್ಕೆ ಮತದಾರರು ಬೆಂಬಲಿಸುತ್ತಾರೆ. ಆದರೆ ನಾವು ಸುಮ್ಮನೆ ಕುಳಿತಿಲ್ಲ. ಎಲ್ಲಾ ಕ್ಷೇತ್ರಗಳಲೂ ಪ್ರಬಲ ಪೈಪೋಟಿ ನೀಡಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಅವರು ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಲು
ಸಜ್ಜಾಗುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಹೆಣ್ಣು ಮಗಳಾಗಿ ಸಂಘಟನೆ ಮಾಡುತ್ತಿರುವುದು ಸತ್ಯ.
ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಆದರೆ ಅವರು ಸ್ಪರ್ಧಿಸುವುದು ವರಿಷ್ಠರ ತೀರ್ಮಾನಕ್ಕೆ
ಬಿಟ್ಟದ್ದು. ಚುನಾವಣೆ ಇನ್ನು ಎರಡು ವರ್ಷ ಇದೆ’ಎಂದು ತಿಳಿಸಿದರು.

ADVERTISEMENT

‌ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ, ರಾಜ್ಯದ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.