
ಹೆತ್ತೂರು: ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶೋಭಾ ಹೇಳಿದರು.
ಯಡಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಕಲೆಗಳು, ಜನಪದ ಹಾಡುಗಳು ಮತ್ತು ಕಥೆಗಳಿಗೆ ಈ ಹಬ್ಬದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು.
ಇದು ಮಕ್ಕಳಿಗೆ ತಮ್ಮ ಸಂಸ್ಕೃತಿಯ ಪರಿಚಯ, ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಮಕ್ಕಳ ಸೃಜನಶೀಲ ಶಕ್ತಿಯನ್ನು ಉತ್ತೇಜಿಸಲಾಗುತ್ತದೆ ಎಂದರು.
ಮುಖ್ಯ ಶಿಕ್ಷಕಿ ಆಶಾ ರಾಣಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಯುವ ಆಸಕ್ತಿ ಹೆಚ್ಚಿಸಲು ಮತ್ತು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಆಯೋಜಿಸಲಾಗುವ ಒಂದು ವಿಶೇಷ ಕಾರ್ಯಕ್ರಮ ಎಂದು ತಿಳಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಪ್ರವೀಣ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಮೋಹನ್, ಸದಸ್ಯರು, ಹೆತ್ತೂರು ಕ್ಲಸ್ಟರ್ ಮಟ್ಟದ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು,ಅಂಗನವಾಡಿ ಸಿಬ್ಬಂದಿ, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.