ಬೇಲೂರು: ಡಿ.20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಮಾ.ನ.ಮಂಜೇಗೌಡ ಇಲ್ಲಿನ ಚನ್ನಕೇಶವ ದೇಗುಲದ ಮುಂದೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾ.ನ.ಮಂಜೇಗೌಡ ಮಾತನಾಡಿ, ‘ಪ್ರಚಾರ ರಥವು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ತಾಲ್ಲೂಕಿನ ಗಡಿ ಭಾಗವಾದ ಬ್ಯಾದನೆ ಗ್ರಾಮದಲ್ಲಿ ರಥ ಸ್ವಾಗತಿಸಲಾಯಿತು. ಸಮ್ಮೇಳನದಲ್ಲಿ ಪ್ರತಿಯೊಬ್ಬ ಕನ್ನಡಿಗರು ಭಾಗವಹಿಸಿ ಕನ್ನಡಾಭಿಮಾನ ಮೆರೆಯಬೇಕಿದೆ’ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ಬಿಆರ್‌ಸಿ ಶಿವಮರಿಯಪ್ಪ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಕಸಾಪ ಮುಖಂಡರಾದ ಮಹೇಶ್, ರಾಜೇಗೌಡ, ಸುಲೇಮಾನ್, ಲೋಕೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.