ADVERTISEMENT

ಹಾಸನ ಕ್ಷೇತ್ರದ ಟಿಕೆಟ್‌ ವಿಚಾರ: ಯಾವ ಸಭೆಯನ್ನೂ ಕರೆದಿಲ್ಲ ಎಂದ ಸಿ.ಎಂ. ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 10:58 IST
Last Updated 28 ಫೆಬ್ರುವರಿ 2023, 10:58 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ   

ಬೇಲೂರು (ಹಾಸನ): ‘ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಜೆಪಿ ಭವನದಲ್ಲಿ ಭಾನುವಾರ ಯಾವುದೇ ಸಭೆ ಇರಲಿಲ್ಲ ಅದು ತಪ್ಪು ಅಭಿಪ್ರಾಯ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

ಚಿಕ್ಕಮಗಳೂರಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾನೇ ಪಕ್ಷದ ಅಧ್ಯಕ್ಷ. ಯಾವುದೇ ಸಭೆ ಇರಲಿಲ್ಲ. ರದ್ದೂ ಆಗಿಲ್ಲ’ ಎಂದರು.

‘ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕೇಳುವ ಹಕ್ಕು ಭವಾನಿ ರೇವಣ್ಣ ಅವರಿಗೂ ಇದೆ. ಸ್ವರೂಪ್‌ಗೂ ಇದೆ. ಪ್ರತಿಯೊಬ್ಬ ಜೆಡಿಎಸ್‌ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಹಕ್ಕಿದೆ. ಯಾರಿಗೆ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನ ಮಾಡುತ್ತದೆ’ ಎಂದರು.

‘ರೇವಣ್ಣ, ಕುಮಾರಸ್ವಾಮಿ, ಬಾಲಕೃಷ್ಣ, ರಮೇಶ್ ಈ ನಾಲ್ಕು ಜ‌ನ ಸಹೋದರರ ನಡುವೆ ಭಿನ್ನಾಭಿಪ್ರಾಯ ಬರುತ್ತದೆ ಎಂದು ಯಾರಾದ್ರು ತಿಳಿದುಕೊಂಡಿದ್ದರೆ ಅದು ತಪ್ಪು ಕಲ್ಪನೆ. ಆ ನಾಲ್ಕು ಮಂದಿ ಯಾವತ್ತಿದ್ದರೂ ಒಂದೇ. ನಾನು ಐವತ್ತು ವರ್ಷದಿಂದ ನೋಡುತ್ತಿದ್ದೇನೆ, ಹೇಗಿದ್ದಾರೋ ಈಗಲೂ ಹಾಗೇ ಇದ್ದಾರೆ’ ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.