ADVERTISEMENT

ನಾಡು, ನುಡಿ ರಕ್ಷಣೆಗೆ ಕರವೇ ಬದ್ಧ: ಮನುಕುಮಾರ್

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 2:10 IST
Last Updated 22 ಆಗಸ್ಟ್ 2025, 2:10 IST
ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಕರವೇ ಘಟಕ ಪ್ರಾರಂಭಿಸುವ ಉದ್ದೇಶದಿಂದ ಬುಧವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಮನುಕುಮಾರ್ ಮಾತನಾಡಿದರು. ಮಹೇಶ್, ಓಹಿಲೇಶ್, ರೇವಣ್ಣ, ರಂಗಸ್ವಾಮಿ ಭಾಗವಹಿಸಿದ್ದರು
ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಕರವೇ ಘಟಕ ಪ್ರಾರಂಭಿಸುವ ಉದ್ದೇಶದಿಂದ ಬುಧವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಮನುಕುಮಾರ್ ಮಾತನಾಡಿದರು. ಮಹೇಶ್, ಓಹಿಲೇಶ್, ರೇವಣ್ಣ, ರಂಗಸ್ವಾಮಿ ಭಾಗವಹಿಸಿದ್ದರು   

ಹೊಳೆನರಸೀಪುರ: ಬೆಂಗಳೂರಿನಲ್ಲಿ ಸೇರಿಕೊಂಡಿರುವ ಅನ್ಯಭಾಷಿಕರ ಉಪಟಳದಿಂದ ನಲುಗಿದ್ದ ಕನ್ನಡಿಗರ ರಕ್ಷಣೆಗಾಗಿ ಹುಟ್ಟಿಕೊಂಡ ಈ ರಕ್ಷಣಾ ವೇದಿಕೆ ಕನ್ನಡ ನಾಡಿನ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಸದಾ ಬದ್ಧ. ಇವುಗಳ ರಕ್ಷಣೆಗೆ ಎಂತಹ ತ್ಯಾಗಕ್ಕೂ ಸಿದ್ದವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮನುಕುಮಾರ್ ತಿಳಿಸಿದರು.

ಪಟ್ಟಣದ ಹೇಮಾವತಿ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆವಯಿತಿಂದ ಬುಧವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿ, ರಕ್ಷಣಾ ವೇದಿಕೆ ಸಾರ್ವಜನಿಕ ಸಮಸ್ಯೆಗಳತ್ತಲೂ ಗಮನಹರಿಸಿ ಪರಿಹಾರ ದೊರಕಿಸಿಕೊಡುತ್ತಿದೆ’ ಎಂದರು.

ತಾಲೂಕು ಅಧ್ಯಕ್ಷ ಓಹಿಲೇಶ್ ಕರವೇಯನ್ನು ಹೋಬಳಿ ಮಟ್ಟದಲ್ಲಿ ಸಂಘಟಿಸಿ ಇದೀಗ ಪ್ರತೀಹಳ್ಳಿಯಲ್ಲೂ ಸಂಘಟನೆ ಮಾಡಿ ಕರವೇ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಸೆಪ್ಟಂಬರ್ 2ರಂದು ಹಾಸನದಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸದಸ್ಯರ ಸಭೆ ಕರೆಯಲಾಗಿದ್ದು, ಈ ಸಭೆಗೆ ಹೆಚ್ಚು ಸದಸ್ಯರನ್ನು ಕರೆತನ್ನಿ ಸಂಘಟನೆ ಬಲಗೊಳ್ಳಲು ಸಹಕರಿಸಿ’ ಎಂದರು.

ADVERTISEMENT

ಹಾಸನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆರಗೋಡು ಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ‘ ಹೊಳೆನರಸೀಪುರ ತಾಲೂಕಿನಲ್ಲಿ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸಿದ ಹಾಗೂ ಸಂಘಟನೆಯಲ್ಲಿ ತೊಡಗಿಸಿಕೊಂಡ ರೀತಿಯಿಂದ ನನ್ನನ್ನು ಗುರುತಿಸಿ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದೆ ಇಲ್ಲೂ ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಕರವೇ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆಡೆಸಿ ಅಂಬೇಡ್ಕರ್ ವೃತ್ತದ ಮೂಲಕ ಹೇಮಾವತಿ ಪ್ರವಾಸಿ ಮಂದಿರಕ್ಕೆ ತೆರಳಿದರು.

ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್. ತಾಲ್ಲೂಕು ಮಾಜಿ ಅಧ್ಯಕ್ಷ ಓಹಿಲೇಶ್, ತಾಲ್ಲೂಕು ಘಟಕದ ಅಧ್ಯಕ್ಷ ರೇವಣ್ಣ, ಉಪಾಧ್ಯಕ್ಷ ರಂಗಸ್ವಾಮಿ, ಹಳ್ಳಿಮೈಸೂರು ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನ್, ಕಸಬಾ ಹೋಬಳಿ ಅಧ್ಯಕ್ಷ ಧರ್ಮರಾಜ್, ದಯಾನಂದ್, ರೈತ ಘಟಕದ ಅಧ್ಯಕ್ಷ ಕುಮಾರ್, ತಾಲ್ಲೂಕು ರೈತ ಘಟಕದ ಅಧ್ಯಕ್ಷ ಭರತ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.