ADVERTISEMENT

ಎಲ್ಲಾ ವರ್ಗದ ಜೀವನಕ್ಕೆ ಅವಕಾಶ ಕೊಟ್ಟ ನಾಡಪ್ರಭು: ಸಿ.ಎನ್. ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 27 ಜೂನ್ 2023, 14:26 IST
Last Updated 27 ಜೂನ್ 2023, 14:26 IST
ಚನ್ನರಾಯಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ವ್ಯಕ್ತಿಗಳನ್ನು ಶಾಸಕ ಸಿ.ಎನ್. ಬಾಲಕೃಷ್ಣ ಮಂಗಳವಾರ ಸನ್ಮಾನಿಸಿದರು. ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ಎಚ್.ಎನ್. ಲೋಕೇಶ್, ಸಿ.ಎನ್. ಅಶೋಕ್ ಇದ್ದಾರೆ
ಚನ್ನರಾಯಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ವ್ಯಕ್ತಿಗಳನ್ನು ಶಾಸಕ ಸಿ.ಎನ್. ಬಾಲಕೃಷ್ಣ ಮಂಗಳವಾರ ಸನ್ಮಾನಿಸಿದರು. ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ಎಚ್.ಎನ್. ಲೋಕೇಶ್, ಸಿ.ಎನ್. ಅಶೋಕ್ ಇದ್ದಾರೆ   

ಚನ್ನರಾಯಪಟ್ಟಣ: ‘ಬೆಂಗಳೂರು ನಗರ ನಿರ್ಮಾಣ ಮಾಡಿ ಅದನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಇಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡ ಶ್ರೇಷ್ಠ ದಾರ್ಶನಿಕ ಮತ್ತು ಉತ್ತಮ ಆಡಳಿತಗಾರ. ಸಿಲಿಕಾನ್ ಸಿಟಿ ಅಭಿವೃದ್ಧಿ ಹೊಂದಲು ಅವರ ಪಾತ್ರ ಮುಖ್ಯವಾದುದು. ಬೆಂಗಳೂರಿನಲ್ಲಿ ಎಲ್ಲಾ ವರ್ಗದವರು ಜೀವನ ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟರು’ ಎಂದು ಹೇಳಿದರು.

ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್, ಕತ್ತರಿಘಟ್ಟ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಚಂದ್ರಶೇಖರಗುರೂಜಿ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್. ವೆಂಕಟೇಶ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ವಿ. ಜಯಪಾಲ್, ಪರಿಸರವಾದಿ ಸಿ.ಎನ್. ಅಶೋಕ್, ಬಿಜೆಪಿ ಮುಖಂಡ ಎ.ಸಿ. ಆನಂದ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ರಾಜ್ಯರೈತಸಂಘದ ಅಧ್ಯಕ್ಷ ಎ.ಎನ್. ಮಂಜೇಗೌಡ, ನಾಡಫ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅನಂದ್ ಕಾಳೇನಹಳ್ಳಿ, ಕಲಾವಿದ ನಾಗರಾಜು, ಪುರಸಭಾ ಸದಸ್ಯ ಗಣೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.