ADVERTISEMENT

ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ

ಪ್ರತಿಭಾ ಕಾರಂಜಿ, ಕಲೋತ್ಸವದಲ್ಲಿ ಶಾಸಕ ಎ. ಮಂಜು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 3:15 IST
Last Updated 7 ಡಿಸೆಂಬರ್ 2025, 3:15 IST
ಕೊಣನೂರಿನ ಬಿ.ಎಸ್.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು 
ಕೊಣನೂರಿನ ಬಿ.ಎಸ್.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು    

ಕೊಣನೂರು: ‘ ಶಾಲೆಯ ಮಕ್ಕಳಲ್ಲಿ ಆಡಗಿರುವ ಪ್ರತಿಭೆ, ಕೌಶಲಗಳನ್ನು ಗುರುತಿಸಲು ಶಿಕ್ಷಕರಿಂದ ಮಾತ್ರ ಸಾಧ್ಯ’ ಎಂದು ಶಾಸಕ ಎ. ಮಂಜು ಅಭಿಪ್ರಾಯಪಟ್ಟರು.

ಪಟ್ಟಣದ ಬಿ.ಎಸ್.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ ಬನ್ನೂರಿನ ಉಷಾ ಅವರಿಗೆ  ಅಭಿನಂದನೆ ಸಲ್ಲಿಸಿದರು.
‌‌
ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯ, ಹಾಡುಗಾರಿಕೆ, ಚಿತ್ರಕಲೆ, ಮಣ್ಣಿನಿಂದ ಮಾಡಿದ ಮಾದರಿಗಳು, ಏಕಪಾತ್ರ ಅಭಿನಯ  ಆಕರ್ಷಕವಾಗಿದ್ದವು.
 
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್,ಸರ್ಕಾರಿ ನೌಕರರ ಸಂಘದ  ತಾಲ್ಲೂಕು  ಘಟಕದ ಅಧ್ಯಕ್ಷ ಪುಟ್ಟರಾಜು, ಪ್ರಾಂಶುಪಾಲ ಗಿರೀಶ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಪುಷ್ಪ ನಾಗೇಶ್, ಪ್ರಮುಖರಾದ ಶ್ರೀನಿವಾಸರ್ತಿ, ಪುಟ್ಟರಾಜು, ಕೆ.ಎನ್.ಚಂದ್ರಶೇಖರ್,  ಶಿಕ್ಷಕರ  ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಪೋಷಕರು ಪಾಲ್ಗೊಂಡಿದ್ದರು.

ವಿದ್ಯಾಥರ್ಿಗಳು ನಿಮರ್ಿಸಿದ್ದ ವಿವಿಧ ಮಣ್ಣಿನ ಆಕೃತಿಗಳನ್ನು ಶಾಸಕ ಎ.ಮಂಜು ವೀಕ್ಷಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT