ಕೊಣನೂರು: ಪೌತಿ ಖಾತಾ ಆಂದೋಲನದ ಮೂಖೇನ ನಿಮ್ಮ ಜಮೀನಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಿ ಎಂದು ಶಾಸಕ ಎ.ಮಂಜು ತಿಳಿಸಿದರು.
ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ನಡೆದ ತಾಲ್ಲೂಕುಮಟ್ಟದ ಪೌತಿಖಾತೆ ಅಂದೋಲನದಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ರೈತರು ವಂಶವೃಕ್ಷ, ಮರಣ ಧೃಢೀಕರಣ ಮುಂತಾದ ದಾಖಲಾತಿ ಸಲ್ಲಿಸಿ ಪೌತಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಕೆ.ಸಿ. ಸೌಮ್ಯ ಮಾತನಾಡಿ, ತಾಲ್ಲೂಕು ಕಚೇರಿಯಲ್ಲಿ ಯಾವುದೇ ಕೆಲಸದಲ್ಲೂ ವಿಳಂಬವಾದಲ್ಲಿ, ರೈತರು ಹಾಗೂ ಸಾರ್ವಜನಿಕರು ನೇರವಾಗಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ವಿಳಂಬ ಮಾಡಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿ ಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಅಕ್ರಮಸಕ್ರಮ ಮನೆಗಳಿಗೆ 94 ಸಿ ಅಡಿಯಲ್ಲಿ ಹಕ್ಕು ಪತ್ರ ಹಾಗೂ ವಿವಿಧ ಪಿಂಚಣಿ ಯೋಜನೆಗಳ ಆದೇಶ ಪ್ರತಿಗಳನ್ನು ಶಾಸಕ ವಿತರಿಸಿದರು.
ಗ್ರೇಡ್ 2 ತಹಶೀಲ್ದಾರ್ ಸಿ.ಸ್ವಾಮಿ, ಶಿರಸ್ತೇದಾರ್ ಡಿ. ಸೋಮಶೇಖರ್, ಉಪ ತಹಶೀಲ್ದಾರ್ ರವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ, ಗ್ರಾಮ ಪಂಚಾಯಿತಿ ಸದಸ್ಯರು, ಮತ್ತು ರಾಜಸ್ವ ನಿರೀಕ್ಷಕ ಭಾಸ್ಕರ್, ಬಲರಾಮ್, ವಸಂತ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ,ಅಧಿಕಾರಿಗಳು, ರೈತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.