
ಕೊಣನೂರು: ‘ಕನ್ನಡವು ಉಳಿದಿರುವುದೇ ನಮ್ಮ ಸಂಸ್ಕೃತಿ, ನಡೆ, ನುಡಿಗಳಿಂದ. ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳೆಸಿಕೊಂಡು ಹೋಗಬೇಕು.ಭಾಷೆ ಉಳಿವಿಗೆ ಶ್ರಮಿಸಿದ ಮಹನೀಯರ ಸ್ಮರಿಸಬೇಕು’ ಎಂದು ಬರಹಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುಂದರೇಶ್ ಡಿ. ಉಡುವಾರೆ ಹೇಳಿದರು.
ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ತಾಲ್ಲೂಕು ಎಚ್.ಡಿ.ರೇವಣ್ಣ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಹಾಗೂ 2024-25 ನೇ ಸಾಲಿನ ಹತ್ತನೆ ತರಗತಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಾಸನ ಹಾಲು ಒಕ್ಕೂಟ ಮಹಾಮಂಡಳದ ನಿರ್ದೇಶಕ ಹೊನ್ನವಳ್ಳಿ ಸತೀಶ್ ಮಾತನಾಡಿ, ‘ಕನ್ನಡ ನಾಡಿಗೆ ಹೆಮ್ಮೆ ತರುವಂತಹ ಸಾಧನೆಗಳನ್ನು ಮಾಡುವ ಮೂಲಕ ನಾಡಿನ ಋಣವನ್ನು ತೀರಿಸಬೇಕು’ ಎಂದರು.
ಜಿ.ಪಂ ಮಾಜಿ ಅಧ್ಯಕ್ಷ ವಿ.ಎ.ನಂಜುಂಡಸ್ವಾಮಿ, ತಾ.ಪಂ ಮಾಜಿ ಅಧ್ಯಕ್ಷ ಯೋಗೇಶ್, ಜೆಡಿಎಸ್ ಮುಖಂಡ ಎಂ.ಎಸ್.ರಮೇಶ್, ಬಿವಿಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎಲ್.ಜಗದೀಶ್, ಗ್ರಾ.ಪಂ ಮಾಜಿ ಸದಸ್ಯ ಕೆ. ಮಹೇಶ್ ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು.
ಕನ್ನಡ ಭಾಷೆಯಲ್ಲಿ ಗರಿಷ್ಠ ಅಂಕ ಪಡೆದ 6 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಎಚ್.ಡಿ. ರೇವಣ್ಣ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾರ್ಬಾಬು, ಶಿಕ್ಷಕ ಬಿ.ಇ.ಕೃಷ್ಣಪ್ಪ, ಉಪನ್ಯಾಸಕಿ ಯಶಸ್ವಿನಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.