
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಲು ವಿಳಂಬ ಮಾಡಿದ್ದರಿಂದ ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ಡಿಪೊ ಬಸ್ ಅನ್ನು ಜಪ್ತಿ ಮಾಡಿ, ಚನ್ನರಾಯಪಟ್ಟಣ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ತಾಲ್ಲೂಕಿನ ಪೂಮಡಿಹಳ್ಳಿ ಗ್ರಾಮದ ರಾಮಚಂದ್ರ ಮತ್ತು ವಸಂತ ದಂಪತಿ ಪುತ್ರಿ 15 ವರ್ಷಗಳ ಹಿಂದೆ ಸಂಭವಿಸಿದ್ದ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದರು. ಪೋಷಕರು ಪರಿಹಾರಕ್ಕಾಗಿ ಚನ್ನರಾಯಪಟ್ಟಣ ನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲದೇ ಹೆಚ್ಚಿನ ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.