ಸಕಲೇಶಪುರ: ತಾಲ್ಲೂಕಿನ ಮಾರನಹಳ್ಳಿ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸೇರಿ 11 ಜನರು ಗಾಯಗೊಂಡಿದ್ದಾರೆ.
ಇದರಿಂದ ಚಾಲಕ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದು, ಎರಡೂ ಬಸ್‌ಗಳಲ್ಲಿದ್ದ ಒಟ್ಟು 10 ಜನರು ಗಾಯಗೊಂಡಿದ್ದಾರೆ. ಅವರಿಗೆ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್‌ಗೆ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಚನ್ನರಾಯಪಟ್ಟಣ ಡಿಪೊದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.