ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರ ಜನ್ಮದಿನದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ನಗರದ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯದಲ್ಲಿ ಅರ್ಚನೆ, ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ದ್ಯಾವೇಗೌಡ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಾಸಕ ರೇವಣ್ಣ ಅವರ ಕೊಡುಗೆ ಜಿಲ್ಲೆಗೆ ಅಪಾರ. ಅವರ ಆಡಳಿತ ಅವಧಿಯಲ್ಲಿ ಹಾಸನ ಜಿಲ್ಲೆ ಅಭಿವೃದ್ಧಿಯ ಉನ್ನತ ಸ್ಥಾನಕ್ಕೆ ಏರಿದೆ. ಅವರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಜೆಡಿಎಸ್ ಜಿಲ್ಲಾ ವಕ್ತಾರ ರಘು ಹೊಂಗೆರೆ, ಮುಖಂಡರಾದ ಶಂಕರ್, ಅಕ್ಬರ್, ಮಂಜೇಗೌಡ, ಸತೀಶ್, ಸಮೀರ್, ಬಿದರೆಕೆರೆ ಜಯರಾಂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.