ADVERTISEMENT

ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಜೀನಾಮೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 15:27 IST
Last Updated 15 ಏಪ್ರಿಲ್ 2022, 15:27 IST
ಎಚ್.ಕೆ. ಕುಮಾರಸ್ವಾಮಿ
ಎಚ್.ಕೆ. ಕುಮಾರಸ್ವಾಮಿ   

ಹಾಸನ: ‘ಪಕ್ಷದ ಸಂಘಟನೆ ದೃಷ್ಟಿಯಿಂದ ಅಧಿಕಾರ ಸ್ಥಾನಗಳು ಬದಲಾಗುತ್ತಿದ್ದು, ಏ.17ರಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅದೇ ದಿನ ನೂತನ ಅಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈಗಾಗಲೇ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ನನ್ನೊಂದಿಗೆ ಚರ್ಚಿಸಿದ್ದು, ನಾನೂ ಹುದ್ದೆ ಬಿಟ್ಟು ಕೊಡಲು ಒಪ್ಪಿದ್ದೇನೆ. ಪಕ್ಷದಸಂಘಟನೆ, ಅಭಿವೃದ್ಧಿಗೆ ಸಹಾಯವಾಗುವುದಾದರೆ ಎಲ್ಲಾ ತ್ಯಾಗಕ್ಕೂಸಿದ್ಧ’ ಎಂದರು.

‘ವಿಧಾನಸಭೆ ಚುನಾವಣೆಯೂ ಹತ್ತಿರ ಬರುತ್ತಿರುವುದರಿಂದ ನನ್ನ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸಬೇಕಿದೆ. ಪಕ್ಷ ಸಂಘಟನೆ ವಿಷಯದಲ್ಲಿ ಇಬ್ರಾಹಿಂ ಅವರಿಗೆ ಸಹಕಾರ ನೀಡುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.