ADVERTISEMENT

ಆಸ್ಪತ್ರೆಗಳಲ್ಲಿ ಹಾಸಿಗೆ, ಸಿಬ್ಬಂದಿ ಕೊರತೆ

ವಿಧಾನ ಪರಿಷತ್‌ ಸದಸ್ಯ ಗೋಪಾಲಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 3 ಮೇ 2021, 13:20 IST
Last Updated 3 ಮೇ 2021, 13:20 IST
ಎಂ.ಎ. ಗೋಪಾಲಸ್ವಾಮಿ
ಎಂ.ಎ. ಗೋಪಾಲಸ್ವಾಮಿ   

ಹಾಸನ: ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ, ಸಿಬ್ಬಂದಿ ಸೇರಿದಂತೆ ಮೂಲ ಸೌಕರ್ಯ ಕೊರತೆ ಇದ್ದು, ಸಭೆಯಲ್ಲಿ ನೀಡಿದ ಭರವಸೆ ಈಡೇರಿಸುವಲ್ಲಿ ಉಸ್ತುವಾರಿಸಚಿವಕೆ.ಗೋಪಾಲಯ್ಯ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಆರೋಪಿಸಿದರು.

ಕೋವಿಡ್‌ ನಿಯಂತ್ರಣ ವಿಚಾರದಲ್ಲಿ ಜಿಲ್ಲೆಯನ್ನು ತಾತ್ಸಾರ ಮಾಡಲಾಗಿದೆ. ನಿತ್ಯ ಅನೇಕರು ಕರೆ ಮಾಡಿ ರೆಮ್‌ಡಿಸಿವಿರ್‌
ಕೊಡಿಸಿ ಎಂದು ಮನವಿ ಮಾಡುತ್ತಿದ್ದಾರೆ. ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಕರೆ ಮಾಡಿದರೆ ಆಮ್ಲಜನಕ ಇಲ್ಲಎಂದು ಹೇಳುತ್ತಾರೆ. ಅಧಿಕಾರಿಗಳೂ ಕೈಚೆಲ್ಲಿ ಕುಳಿತಿದ್ದಾರೆ ಎಂದರು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಜಿಲ್ಲೆಗೆ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ಕೂಡಲೇ ನೇಮಕ ಮಾಡಿಕೊಳ್ಳುವಂತೆ ಸಚಿವರು
ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಜತೆಗೆ ವೆಂಟಿಲೇಟರ್‌ ಆಪರೇಟರ್‌ಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ಆಂಬುಲೆನ್ಸ್‌ ಚಾಲಕರನೇಮಕಕ್ಕೂ ಅನುಮತಿ ನೀಡಿದ್ದರು. ಆದರೆ, ಈವರೆಗೂ ನೇಮಕ ಮಾಡಿಲ್ಲ. ಜಿಲ್ಲಾಧಿಕಾರಿ ಕೇಳಿದರೆ ಹಾರಿಕೆ ಉತ್ತರನೀಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಕಳೆದ ವರ್ಷ ಕೋವಿಡ್‌ ಮೊದಲನೇ ಅಲೆ ಬಂದಾಗ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯ, ಮೊರಾರ್ಜಿದೇಸಾಯಿ ವಸತಿ ಶಾಲೆಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳನ್ನಾಗಿ ಪರಿವರ್ತಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ, ಈ ಬಾರಿ ಬಹುತೇಕರಿಗೆ ಹೋಂ ಐಸೋಲೆಷನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿರುವ ಸೋಂಕಿತರುಕುಟುಂಬ ಸದಸ್ಯರ ಜತೆಗೆ ಸಂಪರ್ಕ ಹೊಂದುತ್ತಿರುವ ಕಾರಣ ಸೋಂಕು ಸಮುದಾಯಕ್ಕೆ ಹರಡುತ್ತಿದೆ ಎಂದುಅಭಿಪ್ರಾಯಪಟ್ಟರು.

ವೈದ್ಯಕೀಯ ಸಿಬ್ಬಂದಿ, ಶುಶ್ರೂಷಕರು, ವೈದ್ಯರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕ,
ಹಾಸಿಗೆ, ರೆಮ್‌ಡಿಸಿವಿರ್‌ ಚುಚ್ಚುಮದ್ದು ಮಾತ್ರವಲ್ಲದೆ ವೈದ್ಯರು, ನರ್ಸ್‌ಗಳ ಕೊರತೆಯೂ ಉಂಟಾಗಲಿದೆ ಎಂದು ಹೇಳಿದರು.

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಸಾವಿನ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ ಅವರನ್ನು ಏಕೆ ವರ್ಗಾವಣೆ ಮಾಬೇಕಿತ್ತು. ಈ ರೀತಿ ಮಾಡುವುದರಿಂದ ಅಧಿಕಾರಿಗಳ ನಡುವೆಸಮನ್ವಯದ ಕೊರತೆ ಉಂಟಾಗಿ, ಆಡಳಿತದಲ್ಲಿ ಗೊಂದಲ ಉಂಟಾಗಲಿದೆ. ಎಂದರು.

ಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್‌.ಕೆ. ಮಹೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.