ADVERTISEMENT

ಚನ್ನರಾಯಪಟ್ಟಣ| ವಾಹನ ಡಿಕ್ಕಿ: ಗಂಡು ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 6:55 IST
Last Updated 7 ಜನವರಿ 2026, 6:55 IST
ಚನ್ನರಾಯಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಂಗಳವಾರ ಮುಂಜಾನೆ ಗಂಡು ಚಿರತೆ ಮೃತಪಟ್ಟಿದೆ
ಚನ್ನರಾಯಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಂಗಳವಾರ ಮುಂಜಾನೆ ಗಂಡು ಚಿರತೆ ಮೃತಪಟ್ಟಿದೆ   

ಚನ್ನರಾಯಪಟ್ಟಣ: ತಾಲ್ಲೂಕಿನ ಗುಲಸಿಂದ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬೈಪಾಸ್ ರಸ್ತೆಯಲ್ಲಿ 5-6 ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮೃತಪಟ್ಟಿದ್ದು, ಅಪಘಾತದಿಂದ ಸತ್ತಿರುವುದಾಗಿ ಅಧಿಕಾರಿಗಳು ಶಂಕಿಸಿದ್ದಾರೆ.

ಚಿರತೆ ಮೃತದೇಹ ಕಂಡ ಸ್ಥಳೀಯರು ಕೂಡಲೇ ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಡಿಸಿಎಫ್ ಸೌರಭ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಲಂದರ್, ಎನ್‍ಸಿಎಫ್ ಕ್ಷೇತ್ರ ನಿರ್ದೇಶಕ ನಿಸಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

‘ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಚಿರತೆಯ ದೇಹದ ಹೊರಭಾಗದಲ್ಲಿ ಗಾಯವಾಗಿರುವ ಕುರುಹುಗಳಿಲ್ಲ. ಒಳ ಭಾಗದಲ್ಲಿ ಪೆಟ್ಟು ಬಿದ್ದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ ಎನ್ನಲಾಗಿದೆ’ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಬೆಲಸಿಂದ ಪ್ರಕೃತಿ ವನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.