ಹಾಸನ: ಹೊಳೆನರಸೀಪುರ ತಾಲ್ಲೂಕಿನಲ್ಲಿ ಕಳೆದ 3–4 ತಿಂಗಳಿನಿಂದ ದನಕರು, ನಾಯಿಗಳನ್ನು ಹೊತ್ತೊಯ್ದು ತಿನ್ನುತ್ತಿದ್ದ ಚಿರತೆ ಬೋನಿಗೆ ಬಿದ್ದಿದೆ.
ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಾಮೇನಹಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು, ಮೂಕ ಪ್ರಾಣಿಗಳನ್ನು ಹೊತ್ತೊಯ್ದು ತಿನ್ನುತ್ತಿತ್ತು, ರಾತ್ರಿ ವೇಳೆ ಅನೇಕ ಬಾರಿ ವಾಹನ ಸವಾರರಿಗೂ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ವಾರದ ಹಿಂದೆ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನು ಇಟ್ಟಿದ್ದು, ಭಾನುವಾರ ಬೆಳಿಗ್ಗೆ 7.30ರ ಸುಮಾರಿಗೆ 3 ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.