ADVERTISEMENT

ಹೊಳೆನರಸೀಪುರ: ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ 

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 1:57 IST
Last Updated 19 ಸೆಪ್ಟೆಂಬರ್ 2025, 1:57 IST
ರಮೇಶ್
ರಮೇಶ್   

ಹೊಳೆನರಸೀಪುರ: ತಾಲ್ಲೂಕಿನ ಹಳ್ಳಿಮೈಸೂರು ಗ್ರಾಮದ ನಾಡ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ರಮೇಶ್ ಗುರುವಾರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ರಮೇಶ್‌ ಅವರು ಮುದ್ದೇಗೌಡ ಅವರ ಪೌತಿ ಖಾತೆ ಮಾಡಿ ಕೊಡಲು ₹4 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹1 ಸಾವಿರ ಪಡೆದಿದ್ದ ಅವರು ಗುರುವಾರ ನಾಡ ಕಚೇರಿಯಲ್ಲೇ ಮತ್ತೆ ₹3 ಸಾವಿರ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಶಿಲ್ಪಾ ಹಾಗೂ ಚಂದ್ರಶೇಖರ್ ಭಾಗಿಯಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.