
ಹಾಸನ: ಅರಸೀಕೆರೆಯ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ಗುತ್ತಿಗೆದಾರ ಮಧು ಎಂಬುವವರ ಬಿಲ್ ಮಾಡಲು ಎಂಜಿನಿಯರ್ ಮಂಜುನಾಥ್ ₹ 25 ಸಾವಿರ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಧು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮಧು ಅವರ ದೂರಿನ ಅನ್ವಯ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮಂಜುನಾಥ್ ಹಣ ಪಡೆಯುತ್ತಿದ್ದ ವೇಳೆ ಲಂಚದ ಸಮೇತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಎಂಜಿನಿಯರ್ ಮಂಜುನಾಥ್ ಅವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.
ಮಂಜುನಾಥ್ ಅವರ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ದಾಳಿ ವೇಳೆ ಪತ್ತೆಯಾದ ನಗದು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.