ADVERTISEMENT

ಲಾರಿ ಪಲ್ಟಿಯಾಗಿ ಬೆಂಗಳೂರು–ಮಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 11:28 IST
Last Updated 1 ನವೆಂಬರ್ 2019, 11:28 IST
ಸಕಲೇಶಪುರ ತಾಲ್ಲೂಕಿನ ಕಪ್ಪಳಿ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬಾ ಗುಂಡಿ ಬಿದ್ದಿದ್ದು ವಾಹನಗಳ ಸಂಚಾರ ದುಸ್ತರವಾಗಿದೆ ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್‌. ಪರಮೇಶ್
ಸಕಲೇಶಪುರ ತಾಲ್ಲೂಕಿನ ಕಪ್ಪಳಿ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬಾ ಗುಂಡಿ ಬಿದ್ದಿದ್ದು ವಾಹನಗಳ ಸಂಚಾರ ದುಸ್ತರವಾಗಿದೆ ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್‌. ಪರಮೇಶ್   

ಸಕಲೇಶಪುರ: ಸಮೀಪದ ಕಪ್ಪಳಿ ಬಳಿ ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಲಾರಿ ಮಗುಚಿ ಬಿದ್ದ ಪರಿಣಾಮ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.

ಸಂಪೂರ್ಣ ಗುಂಡಿಮಯವಾಗಿರುವ ಈ ಮಾರ್ಗದಲ್ಲಿ ಮಳೆ ನೀರು ನಿಂತಿದ್ದರಿಂದ ಲಾರಿಯ ಚಕ್ರ ಗುಂಡಿಯೊಳಗೆ ಇಳಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿದೆ. ಇದರಿಂದಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು.

ಗ್ರಾಮಾಂತರ ಪೊಲೀಸರು ಏಕಮುಖ ಸಂಚಾರ ವ್ಯವಸ್ಥೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.