ADVERTISEMENT

ಸರ್ಕಾರ ಬೀಳಿಸಲು ಹಣದ ಆಮಿಷ

ಯಡಿಯೂರಪ್ಪ ವಿರುದ್ಧ ಶಾಸಕ ಟಿ.ಡಿ.ರಾಜೇಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2018, 20:16 IST
Last Updated 7 ನವೆಂಬರ್ 2018, 20:16 IST

ಹಾಸನ: ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಆಪ್ತರು ಸಮ್ಮಿಶ್ರ ಸರ್ಕಾರ ಭೀಳಿಸಲು ಹಣದ ಆಮಿಷವೊಡ್ಡಿದ್ದರು’ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ಹಾಸನಾಂಬೆಯ ದರ್ಶನ ಪಡೆದು ಬಳಿಕ ಮಾತನಾಡಿದ ಅವರು, ‘ಸಕಲೇಶಪುರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ನಾರ್ವೆ ಸೋಮಶೇಖರ್ ಮೂಲಕ ₹ 50 ಕೋಟಿ ಹಣ ಹಾಗೂ ಸಚಿವ ಸ್ಥಾನ ಕೊಡುವ ಆಮಿಷವೊಡ್ಡಿದ್ದರು. ಹಲವು ಶಾಸಕರಿಗೆ ಗಾಳ ಹಾಕಲಾಗಿತ್ತು. ಪಕ್ಷ ನಿಷ್ಟೆ ಇರುವ ನಾನು ಯಾವುದೇ ಆಮಿಷಕ್ಕೆ ಬಲಿಯಾಗಲಿಲ್ಲ’ ಎಂದು ಹೇಳಿದರು.

‘ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳಲ್ಲಿ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮತ್ತಷ್ಟು ಅಭಿವೃದ್ಧಿ ಮಾಡಲು ಕನಿಷ್ಟ ಒಂದು ವರ್ಷ ಅವಕಾಶ ಬೇಕು. ಐದು ವರ್ಷ ಅವಕಾಶ ಸಿಕ್ಕರೆ ರಾಜ್ಯದಲ್ಲಿ ಉತ್ತಮ ಪ್ರಗತಿಯಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.