ಅರಕಲಗೂಡು: ‘ತಾಲ್ಲೂಕಿನಲ್ಲಿ ಮುಸುಕಿನ ಜೋಳ ಬೆಳೆಗೆ ಕಾಣಿಸಿಕೊಂಡಿರುವ ಬಿಳಿಸುಳಿ ರೋಗದ ಕುರಿತು ಜಂಟಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲಾಗಿದೆ’ ಎಂದು ಸಹಾಯಕ ಕೃಷಿ ನಿರ್ದಶಕಿ ಕೆ.ಜಿ.ಕವಿತಾ ತಿಳಿಸಿದ್ದಾರೆ
‘5 ಹೋಬಳಿಗಳಲ್ಲಿ ಹೋಬಳಿಮಟ್ಟದ ತಂಡಗಳನ್ನು ರಚಿಸಿ ಜುಲೈ 28ರಿಂದ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗಿದೆ. ತಾಲ್ಲೂಕಿನಾದ್ಯಂತ ಸುಮಾರು 20 ಗ್ರಾಮಗಳ ರೋಗ ಪೀಡಿತ ಬೆಳೆ ತಾಕುಗಳಿಗೆ ಭೇಟಿ ನೀಡಲಾಗುವುದು. ತಂಡಗಳು ಗ್ರಾಮಕ್ಕೆ ಭೇಟಿ ನೀಡಿದಾಗ ರೈತರು ಅಗತ್ಯ ಮಾಹಿತಿ ನೀಡುವಂತೆ’ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ವಾಣಿಜ್ಯ ಬೆಳೆ ಮುಸುಕಿನ ಜೋಳವು ರೋಗ ಬಾಧೆಗೆ ತುತ್ತಾಗಿದ್ದು, ಇದಕ್ಕೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಕಾರಣ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ಜುಲೈ 25ರಂದು ನಡೆದ ಸಭೆಯಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕೃಷಿ, ತೋಟಗಾರಿಕೆ, ರೈತ ಪ್ರತಿನಿಧಿಗಳು, ಹೋಬಳಿ ಕೃಷಿ ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮೀಕ್ಷಾ ತಂಡ ರಚನೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.