ADVERTISEMENT

ಹಣ ಗಳಿಕೆಯೇ ಮುಖ್ಯ ಗುರಿಯಾಗದಿರಲಿ: ಬಿ.ಕೆ. ರವಿಕಾಂತ್ ಸಲಹೆ

ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 16:49 IST
Last Updated 12 ಜನವರಿ 2022, 16:49 IST
ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಾಸನದ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಹಾಸನದ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯ ವಿದ್ಯಾರ್ಥಿಗಳು ಜಾಥಾ ನಡೆಸಿದರು.   

ಹಾಸನ: ಜೀವನದಲ್ಲಿ ಹಣ ಗಳಿಕೆಯೊಂದೇ ಮುಖ್ಯ ಗುರಿಯಾಗದೆ ಸಮಾಜ ಕಟ್ಟುವ ಚಿಂತನೆ ಪ್ರಯತ್ನದಲ್ಲಿ ಯುವ ಸಮುದಾಯ ತೊಡಗಬೇಕು ಎಂದು ಹಿರಿಯ ಸಿವಿಲ್ನ್ಯಾಯಾಧೀಶ ಬಿ.ಕೆ. ರವಿಕಾಂತ್ ತಿಳಿಸಿದರು.

ನಗರದ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಬುಧವಾರ ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸ್ವಾಮಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಯುವ ಜನತೆ ದೇಶದ ಬಹು ಮುಖ್ಯ ಸಂಪತ್ತು. ಆಕರ್ಷಣೆಗಳಿಗೆ ಒಳಗಾಗದೇ, ವ್ಯಸನಗಳಿಗೆ ದಾಸರಾಗದೇ ದೇಶಕ್ಕೆ ಕೊಡುಗೆ ನೀಡಬೇಕು. ಯುವಕರು ಸ್ವಾಮಿ ವಿವೇಕಾನಂದರ ತತ್ವದಾರ್ಶಗಳನ್ನು ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಹಣ ಸಂಪಾದನೆ ಮಾಡುವುದು ಸಾಧನೆಯಲ್ಲ. ಮಾನವೀಯ ಗುಣಗಳೊಂದಿಗೆ ಇತರರಿಗೆ ಪ್ರೇರಣೆಯಾಗುವಂತೆ ಬದುಕಬೇಕು ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಪ್ರೀತಂ ಜೆ.ಗೌಡ ಮಾತನಾಡಿ, ಸ್ವಾಮಿ ವಿವೇಕಾನಂದರು ಬಹುತೇಕರಿಗೆಒಂದು ರೀತಿಯಲ್ಲಿ ಸ್ಪೂರ್ತಿ ಅಥವಾ ಮಾದರಿ ಆಗಿರುತ್ತಾರೆ. ವಿಶ್ವವೇ ಒಂದುಕುಟುಂಬ ಅದರಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು ಎಂದು ವಿಶ್ವವನ್ನು
ಒಗ್ಗೂಡಿಸುವ ಕನಸನ್ನು ವಿವೇಕಾನಂದರು ಹೊಂದಿದ್ದರು. ಇಂದು ಕೋವಿಡ್‌ ಇಡೀವಿಶ್ವವನ್ನು ಒಂದು ಮಾಡಿದ್ದು, ಒಂದು ದೇಶದ ಕಷ್ಟಕ್ಕೆ ಮತ್ತೊಂದು ದೇಶ ಸ್ಪಂದಿಸುವಕೆಲಸ ಆಗುತ್ತಿದೆ ಎಂದು ಹೇಳಿದರು.

ಜೀವನದಲ್ಲಿ ಗುರಿ ಮುಖ್ಯ, ಗುರಿ ತಲುಪಲು ನಿಶ್ಚಯವಾದ ದೃಢ ಮನಸ್ಸು ಬೇಕಾಗಿದೆ.ನನಗೂ ವಿವೇಕಾನಂದ ಸ್ಫೂರ್ತಿ ಆಗಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್‌ ಮಾತನಾಡಿ, ಕೇವಲ 39 ವರ್ಷ ಬದುಕಿದ್ದ ವಿವೇಕಾನಂದರು ಭಾರತದ ಯೂತ್‌ ಐಕಾನ್‌ ಆಗಿದ್ದರು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ್‌ಗೌಡ ಮಾತನಾಡಿ, ಸ್ವಾಮಿವಿವೇಕಾನಂದರು ದೇಶ ಭಕ್ತಿ ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಚಿಂತನೆ ಮಾಡಿದ್ದರು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಆರ್‌.ಮೋಹನ್, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಎಸ್‌ಡಿಎಂ ಆಯುರ್ವೇದಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪ್ರಸನ್ನ ಎನ್‌. ರಾವ್, ವಾರ್ತಾ ಮತ್ತು
ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ಕಲಾವಿದರಾದ ಗ್ಯಾರಂಟಿ ರಾಮಣ್ಣ, ಬಿ.ಟಿ ಮಾನವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.