ADVERTISEMENT

ಗಾಂಜಾ ಮಾರಾಟ ಜಾಲ ಪತ್ತೆ: ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 3:17 IST
Last Updated 18 ಸೆಪ್ಟೆಂಬರ್ 2020, 3:17 IST
ಅರಸೀಕೆರೆ ನಗರ ಠಾಣೆ ಪೊಲೀಸರು ನಗರದ ಜೇನುಕಲ್ಲು ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ
ಅರಸೀಕೆರೆ ನಗರ ಠಾಣೆ ಪೊಲೀಸರು ನಗರದ ಜೇನುಕಲ್ಲು ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ   

ಅರಸೀಕೆರೆ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಯುವಕರನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಗರದ ಜೇನುಕಲ್ಲು ಬಡಾವಣೆಯ ನಿವಾಸಿಗಳಾದ ಸುಲ್ತಾನ್ (20), ಸೈಫ್ ಖಾನ್ (20), ಇಬ್ರಾಹಿಂ (20) ಆರೋಪಿಗಳು.

ನಗರದಲ್ಲಿ ಗಾಂಜಾ ಮಾರಾಟ ದಂಧೆ ನಡೆಯುತ್ತಿದೆ ಎಂದು ಸಾರ್ವ ಜನಿಕರು ದೂರಿದ್ದರಿಂದ ಸಿಪಿಐ ಚಂದ್ರ ಶೇಖರಯ್ಯ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ನಗರದ ಯಾದಾಪುರ ರಸ್ತೆಯಲ್ಲಿರುವ ಜೇನುಕಲ್ಲು ಕ್ರೀಡಾಂಗಣದ ಪಕ್ಕದಲ್ಲಿ ಆಟೊದಲ್ಲಿ ಯುವಕರು ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ಸುಮಾರು 30 ರಿಂದ 40 ಪ್ಯಾಕೆಟ್‌ (ಸುಮಾರು 150 ಗ್ರಾಂ) ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಹಶೀಲ್ದಾರ್ ಸಂತೋಷ್ ಕುಮಾರ್ ಪರಿಶೀಲನೆ ನಡೆಸಿ, ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರ ಪೊಲೀಸ್ ಠಾಣೆಯ ಪಿಎಸ್ಐ ತಿಮ್ಮಯ್ಯ, ಪೊಲೀಸ್ ಸಿಬ್ಬಂದಿ ಸಿದ್ದೇಶ್, ಹರೀಶ್, ಕೀರ್ತಿ ಕುಮಾರ್, ವಸಂತ್ ಕುಮಾರ್, ಅಪರಾಧ ವಿಭಾಗದ ಸಿಬ್ಬಂದಿ ಮಂಜೇಗೌಡ, ರಮೇಶ್ ತಂಡದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.