ಆಲೂರು: ‘ನಮ್ಮ ಕ್ಲಿನಿಕ್ ಯೋಜನೆಯು ತಾಲ್ಲೂಕಿನ ಜನತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಮೂಲಸೌಲಭ್ಯಗಳನ್ನು ನೀಡಲಿದೆ. ಜನಸಾಮಾನ್ಯರು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಬೇಕು’ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಆಲೂರು ಅಂಬೇಡ್ಕರ್ ಭವನದಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆ ಹಾಗೂ ಅತಿಸಾರ ಭೇದಿ ನಿಯಂತ್ರಣ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ರೋಗಿಗಳು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಕೆಲವು ವೈದ್ಯರು ಖಾಸಗಿ ಮೆಡಿಕಲ್ ಶಾಪ್‍ಗಳಿಗೆ ಚೀಟಿ ಬರೆದುಕೊಡುವ ಬಗ್ಗೆ ದೂರುಗಳಿವೆ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳು ಹಾಗೂ ತಾಲ್ಲೂಕು ಅರೋಗ್ಯಾಧಿಕಾರಿಗಳು ಹೆಚ್ಚು ಗಮನ ನೀಡಬೇಕು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ನಿಸ್ಸಾರ್ ಫಾತಿಮಾ ಮಾತನಾಡಿ, ‘ನಮ್ಮ ಕ್ಲಿನಿಕ್‍ನಲ್ಲಿ ಆಯುಷ್ಮಾನ್, ಆರೋಗ್ಯಶ್ರೀ ಸೇವೆಗಳ ಸದುಪಯೋಗ ಪಡೆದುಕೊಳ್ಳಲು ಜನರಿಗೆ ಹೆಚ್ಚು ಅರಿವು ಮೂಡಿಸಬೇಕು. ನಮ್ಮ ಕ್ಲಿನಿಕ್‍ನಲ್ಲಿ ಸಾರ್ವಜನಿಕರಿಗೆ 12 ರೀತಿಯ ಸೇವೆಗಳು ಲಭ್ಯವಿರುತ್ತವೆ’ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಸುಬ್ರಮಣ್ಯ ಶರ್ಮ, ಅರೋಗ್ಯ ಇಲಾಖೆ ಆರ್.ಸಿ.ಎಚ್. ಶಿವಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಜಯಪ್ರಕಾಶ್, ಸಿಪಿಐ ಮೋಹನ್ ರೆಡ್ಡಿ, ಪಟ್ಟಣ ಪಂಚಾಯಿತಿ ಸದಸ್ಯ ತೋಫಿಕ್, ಧರ್ಮ, ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.