ADVERTISEMENT

₹ 1 ಲಕ್ಷ ಇಡಗಂಟು ನೀಡಲು ಒತ್ತಾಯ

ಜಿ.ಪಂ ಕಚೇರಿ ಎದುರು ಅಕ್ಷರ ದಾಸೋಹ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 15:42 IST
Last Updated 11 ಏಪ್ರಿಲ್ 2022, 15:42 IST
ಹಾಸನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅಕ್ಷರ ದಾಸೋಹ ನೌಕರರು ಪ್ರತಿಭಟನೆ ನಡೆಸಿದರು
ಹಾಸನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅಕ್ಷರ ದಾಸೋಹ ನೌಕರರು ಪ್ರತಿಭಟನೆ ನಡೆಸಿದರು   

ಹಾಸನ: ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಅಡುಗೆಯವರನ್ನು 60 ವರ್ಷ ವಯೋಮಾನ ನೆಪವೊಡ್ಡಿ ಬಿಡುಗಡೆಮಾಡಿರುವ ಕ್ರಮ ಖಂಡಿಸಿ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ಸೋಮವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರುಪ್ರತಿಭಟನೆ ನಡೆಸಲಾಯಿತು.

2001-02 ರಲ್ಲಿ ಅಡುಗೆ ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳುವಾಗವಿದ್ಯಾಭ್ಯಾಸ ಮತ್ತು ವಯಸ್ಸಿನ ಅರ್ಹತೆ ಮಾತ್ರ ನಿಗದಿ ಮಾಡಲಾಗಿತ್ತು.ಅದರಲ್ಲಿ ನಿವೃತ್ತಿ ವಯಸ್ಸು ನಿಗದಿಪಡಿಸಿಲ್ಲ. 2016 ರಿಂದಲೂ ವಯಸ್ಸಿನ ಆಧಾರದಲ್ಲಿ ನಿವೃತ್ತಿ ಸೌಲಭ್ಯ ಕೊಡಬೇಕೆಂದು ಹಲವು ಬಾರಿ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡರೂ ಮುತುವರ್ಜಿ ವಹಿಸಲಿಲ್ಲ ಎಂದು ದೂರಿದರು.

60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗನಿವೃತ್ತಿ ವೇತನ ಅಥವಾ ₹ 1 ಲಕ್ಷ ಇಡಗಂಟು ನೀಡಿ ಬಿಡುಗಡೆ ಮಾಡಬೇಕು. ಬಜೆಟ್‌ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ ₹ 1,000 ವೇತನವನ್ನು ಜನವರಿ 2022 ರ ಜನವರಿಯಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಖಾಸಗೀಕರಣ ಮಾಡಬಾರದು ಮತ್ತು ನೌಕರರನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಅಕ್ಷರ ದಾಸೋಹ ನೌಕರರ ಸಂಘದ ಖಜಾಂಚಿ ಕಲಾವತಿ ಮಾತನಾಡಿ,ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಶಿಫಾರಸ್ಸಿನಂತೆವೇತನಹೆಚ್ಚಳ ಮಾಡಬೇಕು. ಬೇಸಿಗೆ ಮತ್ತು ದಸರಾ ರಜೆಗಳವೇತನ ನೀಡಬೇಕು ಎಂದರು.

ಶಾಲಾ ಅವಧಿಯ ನಂತರ ನರೇಗಾ ಯೋಜನೆಯಡಿ ಶಾಲಾ ಕೈತೋಟದಕೆಲಸ ನೀಡಿ ವೇತನ ನೀಡಬೇಕು. ನೌಕರರಿಗೆ ಪ್ರತಿ ತಿಂಗಳು 5 ನೇ ತಾರೀಖಿನ ಒಳಗೆ ವೇತನ ಪಾವತಿಯಾಗಬೇಕು. ನೇರವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿಯ ಮೇಲ್ವಿಚಾರಣೆ ನಡೆಸಬೇಕು. ಪ್ರತಿಶಾಲೆಯಲ್ಲಿ ಕನಿಷ್ಠ 2 ಜನ ಅಡುಗೆಯವರು ಇರಲೇಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆಎಂ.ಬಿ. ಪುಷ್ಪಾ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಅರವಿಂದ್ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.