ADVERTISEMENT

ಹಾಸನ: ಜಿಲ್ಲೆಯಲ್ಲಿ ಮಳೆ ಬಿರುಸು, ಕೃಷಿ ಚಟುವಟಿಕೆ ಚುರುಕು

ಮೂರು ದಿನಗಳಿಂದ ತುಂತುರು ಮಳೆ, ಮೋಡ ಕವಿದ ವಾತಾವರಣ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 13:15 IST
Last Updated 15 ಜೂನ್ 2021, 13:15 IST
ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಗ್ರಾಮದ ಗದ್ದೆಯಲ್ಲಿ ಭತ್ತದ ಸಸಿ ಮಡಿ ಮಾಡಿರುವುದು.
ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಗ್ರಾಮದ ಗದ್ದೆಯಲ್ಲಿ ಭತ್ತದ ಸಸಿ ಮಡಿ ಮಾಡಿರುವುದು.   

ಹಾಸನ: ಜಿಲ್ಲೆಯಲ್ಲಿ ಮಂಗಳವಾರವೂ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಆಶಾಭಾವ ಮೂಡಿಸಿದೆ.

ಮುಂಗಾರು ಬಿತ್ತನೆಗೆ ಮಳೆಯ ಅವಶ್ಯಕತೆ ಹೆಚ್ಚಿದ್ದು, ಮೂರು ದಿನಗಳಿಂದ ತುಂತುರು ಮಳೆ, ಮೋಡ ಕವಿದ ವಾತಾವರಣ ಹಾಗೂ ಗಾಳಿ ಬೀಸುತ್ತಿರುವುದರಿಂದ ಕೃಷಿ ಚಟುವಟಿಕೆಗಳುಚುರುಕುಗೊಂಡಿವೆ.

ಮಲೆನಾಡು, ಅರೆ ಮಲೆನಾಡು ಭಾಗದಲ್ಲಿ ಮಳೆ ಬಿರುಸು ಪಡೆದಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರಿ. ಭತ್ತದ ಗದ್ದೆಗಳಲ್ಲಿ ಸಸಿ ಮಡಿ ತಯಾರಿಕೆ, ಕಾಫಿ ತೋಟದಲ್ಲಿ ಗೊಬ್ಬರ ಹಾಕುವ ಕಾರ್ಯ ನಡೆಯುತ್ತಿದೆ. ಲಾಕ್‌ಡೌನ್ ಜಾರಿಯಲ್ಲಿ ಇರುವುದರಿಂದ ಕಾರ್ಮಿಕರ ಕೊರತೆ ಉಂಟಾಗಿದೆ.

ADVERTISEMENT

ಹಾಸನ, ಅರಕಲಗೂಡು ತಾಲ್ಲೂಕಿನಲ್ಲಿ ಆಲೂಗಡ್ಡೆ, ಮುಸುಕಿನ ಜೋಳ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದರೆ, ಮಲ್ಲಿಪಟ್ಟಣದಲ್ಲಿ ಭತ್ತದ ಸಸಿ ಮಡಿ ತಯಾರಿಕೆಗೆ ರೈತರು ಭೂಮಿ ಹದ ಮಾಡುತ್ತಿದ್ದಾರೆ. ಕೊಣನೂರು ಭಾಗದಲ್ಲಿ ತಂಬಾಕು ನಾಟಿ ಕಾರ್ಯ ಪೂರ್ಣಗೊಂಡಿದೆ. ಇನ್ನುಹಲವು ಕಡೆ ಮುಸುಕಿನ ಜೋಳ, ದ್ವಿದಳ ಧಾನ್ಯಗಳು, ಭತ್ತ, ರಾಗಿ ಬೆಳೆಗಳ ಕಾರ್ಯ ಪ್ರಾಂಭವಾಗಬೇಕಿದೆ.

ಬೆಳಿಗ್ಗೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನಗರದ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಗುಂಡಿಗಳಲ್ಲಿ ನೀರು ನಿಂತಿತ್ತು. ತಗ್ಗು ಪ್ರದೇಶಗಳು ಜಲಾವೃತ್ತವಾಗಿದೆ.

ಹಾಸನ ನಗರ ಹಾಗೂ ಸುತ್ತಮುತ್ತಲ ಪ್ರದೇಶ, ಆಲೂರು, ಬೇಲೂರು, ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಬಿಟ್ಟು ಬಿಟ್ಟು ಜಿಟಿಜಿಟಿ ಮಳೆ ಸುರಿಯುತ್ತಿದೆ. ಸಕಲೇಶಪುರು, ಹೆತ್ತೂರು, ಮಾರನಹಳ್ಳಿ, ಯಸಳೂರು, ಶುಕ್ರವಾರ ಸಂತೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಜೋರು ಮಳೆಯ ಜೊತೆಗೆ ಗಾಳಿಯೂ ಬೀಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.