ADVERTISEMENT

Muda Scam | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 13:30 IST
Last Updated 17 ಆಗಸ್ಟ್ 2024, 13:30 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಬಾಣಾವರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಬಾಣಾವರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು   

ಬಾಣಾವರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಪಟ್ಟಣದ ಕನಕ ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಬಗರ್ ಹುಕುಂ ಸಮಿತಿ ಸದಸ್ಯ ಬಿ.ಎಂ. ಜಯಣ್ಣ ಮಾತನಾಡಿ, ಸಿದ್ದರಾಮಯ್ಯ ನವರು ನಾಡಿನ ಜನಪ್ರಿಯ ಮುಖ್ಯಮಂತ್ರಿಯಾಗಿದ್ದು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದಾರೆ. ಯಾವುದೇ ಕಪ್ಪು ಚುಕ್ಕಿ, ಕಳಂಕ ಇಲ್ಲದ ಅವರು ನೇರ ರಾಜಕಾರಣ ಮಾಡುವುದನ್ನು ಸಹಿಸದೆ ಕೆಲವರು ಅವರ ಮೇಲೆ ಪಿತೂರಿ ನಡೆಸುತ್ತಿರುವುದು ಬೇಸರದ ಸಂಗಂತಿ. ಎಲ್ಲ ಜನಾಂಗದ ಪ್ರೀತಿ ವಿಶ್ವಾಸ ಗಳಿಸಿರುವ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದ ಅಸಾಂವಿಧಾನಿಕ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ರವಿಶಂಕರ್ ಮಾತನಾಡಿ, ಸಿದ್ದರಾಮಯ್ಯನವರ ತೇಜೋವಧೆ ಮಾಡುವ ಉದ್ದೇಶದಿಂದಲೆ ಈ ರೀತಿ ಮಾಡಲಾಗುತ್ತಿದೆ. ನಾಡಿನ ಜನರು ಸಿದ್ದರಾಮಯ್ಯನವರ ಪರವಾಗಿದ್ದು, ಸತ್ಯಕ್ಕೆ ಜಯವಾಗಲಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಆರ್.ಶ್ರೀಧರ್, ಜಿ.ಕೆ.ಸತೀಶ್, ಕರವೇ ಲಕ್ಷ್ಮೀಶ್, ಸಂಗೊಳ್ಳಿ ರಾಯಣ್ಣ ಸಂಘದ ಅಧ್ಯಕ್ಷ ಭಾಸ್ಕರ್, ಪ್ರಕಾಶ್, ಆಸೀಫ್, ಇಬ್ರಾನ್, ಆರೀಫ್ ಜಾನ್, ಬೀರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.