ADVERTISEMENT

ಹಾಸನ ನಗರಸಭೆ ಸದಸ್ಯನ ಕೊಲೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 15:43 IST
Last Updated 1 ಜೂನ್ 2022, 15:43 IST

ಹಾಸನ: ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಅವರನ್ನು ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಗರದ ಜವೇನಹಳ್ಳಿ ಮಠ ರಸ್ತೆಯಲ್ಲಿ ಬುಧವಾರ ಈ ಘಟನೆ ಸಂಜೆ ನಡೆದಿದೆ.

ನಗರಸಭೆ ಜೆಡಿಎಸ್ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜ್ (40) ಆಕ್ಟಿವ್ ಹೋಂಡಾ ಸ್ಕೂಟರ್ ನಲ್ಲಿ ಮನೆಗೆ ಹಿಂದಿರುಗುವ ವೇಳೆ ಹಿಂಬಾಲಿಸಿದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಷ್ಟರಲ್ಲಿಯೇ ಮೃತಪಟ್ಟಿರುವುದಾಗಿ‌ ವೈದ್ಯರು ಘೋಷಿಸಿದರು.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ‌ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೊಲೆಯಾದ ಪ್ರಶಾಂತ್ ಅವರು, ಹಾಸನದಲ್ಲಿ ಈ ಹಿಂದೆ ಡಾ‌. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಹಾ. ರಾ. ನಾಗರಾಜ್ ಅವರ ಪುತ್ರ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.