ADVERTISEMENT

ನಗರದಲ್ಲಿ ಯೋಗ ನಡಿಗೆ

ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2019, 19:57 IST
Last Updated 13 ಜೂನ್ 2019, 19:57 IST


ಹಾಸನ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್‌ 17ರಂದು ನಗರದಲ್ಲಿ ಯೋಗ ನಡಿಗೆ ಆಯೋಜಿಸಲಾಗಿದೆ.

ಆಯುಷ್ ಇಲಾಖೆ, ಜಿಲ್ಲಾಡಳಿತ, ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 17 ರ ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಯೋಗ ನಡಿಗೆ (ಯೋಗಥಾನ್) ಆರಂಭಗೊಳ್ಳಲಿದೆ.

ಸಾರ್ವಜನಿಕರು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಯೋಗ ಶಿಬಿರಾರ್ಥಿಗಳು ಪಾಲ್ಗೊಳ್ಳುವರು. ಈ ಯೋಗ ನಡಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ.

ADVERTISEMENT

ಜೂನ್ 21 ರಂದು 5ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ. ಸರ್ಕಾರ, ಸರ್ಕಾರೇತರ ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ರೂಪರೇಷೆ ಸಹ ಸಿದ್ಧಪಡಿಸಲಾಗಿದೆ.

ಅಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಎಚ್.ಡಿ.ರೇವಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಪ್ರೀತಂ ಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ಎನ್ ಸಿಸಿ ವಿದ್ಯಾರ್ಥಿಗಳು, ಸರ್ಕಾರಿ, ಸರ್ಕಾರೇತರ ನೌಕರರು 45 ನಿಮಿಷಗಳ ಯೋಗ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ತದನತಂತರ ಸಭಾ ಕಾರ್ಯಕ್ರಮ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.