(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಹಾಸನ: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ (80) ಮತ್ತು ಮೇರಿ (73) ವೃದ್ಧ ದಂಪತಿ ನಗರದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿಗೆ ಆಸ್ತಿ, ಮನೆ ಹಾಗೂ ಕಾಫಿ ತೋಟ ಇದ್ದರೂ ವೃದ್ಧಾಪ್ಯದಲ್ಲಿ ನೋಡಿಕೊಳ್ಳುವವರು ಇಲ್ಲದೇ ಒಂಟಿಯಾಗಿದ್ದರು. ಇಬ್ಬರು ಪುತ್ರರಿದ್ದರೂ ತಮ್ಮ ಬಗ್ಗೆ ಸೂಕ್ತ ಗಮನ ಹರಿಸುತ್ತಿಲ್ಲ ಎಂಬ ಬೇಸರ ದಂಪತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ವಿರಾಜಪೇಟೆಯ ವೃದ್ಧಾಶ್ರಮದಲ್ಲೂ ಅವರು ಉಳಿದಿದ್ದರು.
ಒಬ್ಬ ಪುತ್ರ ಬೆಂಗಳೂರಿನಲ್ಲಿ ನೆಲೆಸಿದ್ದರೆ, ಮತ್ತೊಬ್ಬ ಪುತ್ರ ಊರಿನಲ್ಲೇ ವಾಸವಾಗಿದ್ದಾನೆ. ಶನಿವಾರ ರಾತ್ರಿ ನಗರದ ಕೇಂದ್ರ ಬಸ್ ನಿಲ್ದಾಣದ ಸಮೀಪ ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಠಾಣೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.