ಸಕಲೇಶಪುರ: ಚನ್ನರಾಯಪಟ್ಟಣ ತಾಲ್ಲೂಕಿನ ನವ ವಿವಾಹಿತೆ ಪೂಜಾ (22) ಗುರುವಾರ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರು.
ಮಳಲಿ ಗ್ರಾಮದ ಅಶ್ವತ್ಥ್ ಅವರೊಂದಿಗೆ ಫೆಬ್ರುವರಿಯಲ್ಲಿ ಪ್ರೇಮ ವಿವಾಹವಾಗಿತ್ತು. ನಂತರ ದಂಪತಿ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮಹಿಳೆಗೆ ಹಿಂದೆಯೇ ಬೇರೊಬ್ಬರೊಂದಿಗೆ ನಿಶ್ಚಿತಾರ್ಥವಾಗಿತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.