
ಹಿರೀಸಾವೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಅಂಬೇಡ್ಕರ್ ವೃತ್ತದ ಸಮೀಪ ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಸಕನಳ್ಳಿಯ ಎಂ.ಸಿ.ದೇವರಾಜ್ ಎಂಬಾತ ಸ್ಥಳದಲ್ಲಿಯೇ ಭಾನುವಾರ ಮೃತಪಟ್ಟರು.
ಸಂಜೆ ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆ ಕಡೆ ನುಗ್ಗಿ ಸ್ಕೂಟರ್ ಗುದ್ದಿದೆ. ಈ ವೇಳೆ ಸವಾರ ಮೃತಪಟ್ಟಿದ್ದಾರೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕರು ಹೊರತುಪಡಿಸಿ, ಯಾವುದೇ ಪ್ರಯಾಣಿಕರು ಇರಲಿಲ್ಲ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಎಸ್ಐ ರೂಪ ಬೀರದಾರ್ ಮತ್ತು ಪೊಲೀಸ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
‘ಈ ವೃತ್ತದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ನಾಗರಿಕರು ಮತ್ತು ವಿವಿಧ ಸಂಘಟನೆಯವರು ಹಲವು ಬಾರಿ ಮನವಿ ಸಲ್ಲಿಸಿ, ಪ್ರತಿಭಟನೆ ನಡೆಸಿದರು ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.