ADVERTISEMENT

ಸಿ.ಎಂ ಬದಲಾವಣೆ ಇಲ್ಲ: ಸಚಿವ ಕೆ.ಸಿ.ನಾರಾಯಣ ಗೌಡ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 16:04 IST
Last Updated 5 ಜುಲೈ 2021, 16:04 IST
ಸಚಿವ ಕೆ.ಸಿ.ನಾರಾಯಣ ಗೌಡ
ಸಚಿವ ಕೆ.ಸಿ.ನಾರಾಯಣ ಗೌಡ   

ಹಾಸನ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ, 100 ರಿಂದ 150 ಸ್ಥಾನ ಗೆಲ್ಲುತ್ತೇವೆ ಎಂದು ಯುವಜನ ಮತ್ತು ಕ್ರೀಡಾ ಸಬಲೀಕರಣ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ತೊಂದರೆ ಆಗಿಲ್ಲ. ಅಭಿವೃದ್ಧಿ ಕಾರ್ಯಗಳಿಗೂ ಹಿನ್ನೆಡೆಯಾಗಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ನಂಬಿ ಬಿಜೆಪಿ ಸೇರ್ಪಡೆಯಾಗಿದ್ದೇವೆ ಹೊರತು ಬೇರೆ ಯಾರನ್ನೂ ನಂಬಿ ಬಂದಿಲ್ಲ. ನಾವು ಬಿಜೆಪಿಯಲ್ಲಿ ಸಂತೋಷವಾಗಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT