ADVERTISEMENT

ಶಾಲೆ–ಕಾಲೇಜಿಗೆ ರಜೆ ಇಲ್ಲ

ಒಂದೇ ಶಿಕ್ಷಣ ಸಂಸ್ಥೆಯಲ್ಲಿ ಹೆಚ್ಚು ಸೋಂಕು ಪತ್ತೆಯಾದರೆ ರಜೆ: ಡಿ.ಸಿ.ಗಿರೀಶ್‌

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 16:55 IST
Last Updated 12 ಜನವರಿ 2022, 16:55 IST
ಆರ್.ಗಿರೀಶ್
ಆರ್.ಗಿರೀಶ್   

ಹಾಸನ: ‘ಕೊರೊನಾ ಸೋಂಕು ಈ ಬಾರಿ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿಲ್ಲ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ, ಕಾಲೇಜುಗಳನ್ನು ಸದ್ಯಕ್ಕೆ ಮುಚ್ಚುವ ಯೋಚನೆ ಇಲ್ಲ’ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸ್ಪಷ್ಟಪಡಿಸಿದರು.

‘ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 5.45 ರಷ್ಟಿದೆ. ಒಂದೇ ಶಾಲೆ, ಕಾಲೇಜಿನಲ್ಲಿ ಅಧಿಕ ಪ್ರಮಾಣದ ಪಾಸಿಟಿವ್ ಪ್ರಕರಣ ಕಂಡು ಬಂದರೆ ಆ ಸಂಸ್ಥೆಗಳಿಗೆ ಐದು ದಿನ ರಜೆ ನೀಡಲಾಗುವುದು. ವಿದ್ಯಾರ್ಥಿಗಳು ಮರಳಿ ತರಗತಿಗೆ ಬರುವಾಗ ಕೋವಿಡ್ ತಪಾಸಣೆಮಾಡಿಸಿಕೊಂಡು ನೆಗೆಟಿವ್ ವರದಿಯೊಂದಿಗೆ ಹಾಜರಾಗಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪೋಷಕರು ಮತ್ತು ವಿದ್ಯಾಥಿಗಳು ಗಾಬರಿ ಆಗುವ ಅಗ
ತ್ಯವಿಲ್ಲ. ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳಿಗೆ ಹಾಜರಾಗಿ ತಮ್ಮ ಶಿಕ್ಷಣ ಮುಂದುವರಿಸಬಹುದು. 15–18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯ ನಡೆದಿದೆ. ಈವರೆಗೆ ಶೇಕಡಾ 68ರಷ್ಟು ಪೂರ್ಣಗೊಂಡಿದೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲೆಯಲ್ಲಿ ಶೇಕಡಾ 5 ಕ್ಕಿಂತ ಹೆಚ್ಚು ಸೋಂಕಿತ ಪ್ರಮಾಣ ಇರುವುದ
ರಿಂದ ನಿತ್ಯಕೋವಿಡ್ ತಪಾಸಣೆ ಹೆಚ್ಚಿಸ
ಲಾಗಿದೆ. ಅಂದಾಜು ಏಳು ಸಾವಿರ ಆರ್‌ಟಿಪಿಸಿಆರ್, ರ್‍ಯಾಟ್‌ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲಾ ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ
ಕೋವಿಡ್ ಆರೈಕೆ ಕೇಂದ್ರ ತೆರೆಯಲಾಗಿದೆ. ಹೆಚ್ಚುವರಿ ಕೋವಿಡ್ ಕೇಂದ್ರಗಳನ್ನುತೆರೆಯಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಈಗಾಗಲೇ 18 ವರ್ಷ ಮೇಲ್ಪಟ್ಟ
ವರಿಗೆ ಮೊದಲ ಡೋಸ್ ಶೇಕಡಾ100 ರಷ್ಟು ನೀಡಲಾಗಿದೆ. 2 ನೇ ಡೋಸ್ ಲಸಿಕೆ
ಯಲ್ಲಿ ಶೇ 87.5 ರಷ್ಟು ಸಾಧನೆಯಾಗಿದೆ. ಉಳಿದವರಿಗೆ ಶೀಘ್ರ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲರೂ ಮಾಸ್ಕ್‌ ಧರಿಸಿ ಓಡಾಡಬೇಕು. ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಎಸ್.ಪ್ರಕಾಶ್‌ ಇದ್ದರು.
ರಸ್ತೆ ನಿರ್ಮಾಣ ಕಾಮಗಾರಿಗಾಗಿ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರದಿಂದ ಮಾರನಹಳ್ಳಿವರೆಗೆ ರಸ್ತೆ ಬಂದ್ ಮಾಡುವಂತೆ ಗುತ್ತಿಗೆದಾರರು ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗೆ ಸಂಬಂಧಪಟ್ಟ ವಿಷಯವಾಗಿದೆ. ರಸ್ತೆ ಬಂದ್‌ ಮಾಡಿದರೆ ಪರ್ಯಾಯ ಮಾರ್ಗ ರೂಪಿಸಬೇಕಿದೆ. ಎಂಜಿನಿಯರ್‌ಗಳು, ತಜ್ಞರುಕಾಮಗಾರಿಪರಿಶೀಲನೆ ನಡೆಸಿದ ಬಳಿಕ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.