ADVERTISEMENT

‘ನುಗ್ಗೇಹಳ್ಳಿ ಧಾರ್ಮಿಕ ಪ್ರವಾಸಿ ಕೇಂದ್ರ ಆಗಲಿ’

ಸ್ಮಾರಕಗಳ ಸಂರಕ್ಷಣಾ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 15:27 IST
Last Updated 22 ಮಾರ್ಚ್ 2025, 15:27 IST
<div class="paragraphs"><p>ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಹಾಸನ ಸರ್ಕಾರಿ ವಾಣಿಜ್ಯ ಕಾಲೇಜು ಹಾಗೂ ಗ್ರಾಮದ ವಿವಿಧ ಸಂಘಗಳು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸ್ಮಾರಕಗಳ ಸಂರಕ್ಷಣಾ ಜಾಗೃತಿ ಜಾತ ಅಭಿಯಾನ ಕಾರ್ಯಕ್ರಮಕ್ಕೆ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.</p></div>

ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಹಾಸನ ಸರ್ಕಾರಿ ವಾಣಿಜ್ಯ ಕಾಲೇಜು ಹಾಗೂ ಗ್ರಾಮದ ವಿವಿಧ ಸಂಘಗಳು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸ್ಮಾರಕಗಳ ಸಂರಕ್ಷಣಾ ಜಾಗೃತಿ ಜಾತ ಅಭಿಯಾನ ಕಾರ್ಯಕ್ರಮಕ್ಕೆ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

   

ನುಗ್ಗೇಹಳ್ಳಿ: ಚಂದ್ರಮೌಳೇಶ್ವರ ದೇವಾಲಯ ಇರುವ ನುಗ್ಗೇಹಳ್ಳಿ ಕ್ಷೇತ್ರವನ್ನು ಧಾರ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಮಾಡಬೇಕು ಎಂದು ಇತಿಹಾಸಕಾರ ಎಂ. ಬಿ. ಇರ್ಷಾದ್ ಸರ್ಕಾರವನ್ನು ಒತ್ತಾಯಿಸಿದರು.

ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಹಾಸನ ಸರ್ಕಾರಿ ವಾಣಿಜ್ಯ ಕಾಲೇಜು ಹಾಗೂ ಗ್ರಾಮದ ವಿವಿಧ ಸಂಘಗಳು ಮತ್ತು ಸಹಯೋಗದಲ್ಲಿ ಸ್ಮಾರಕಗಳ ಸಂರಕ್ಷಣಾ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ADVERTISEMENT

 ಗ್ರಾಮವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು , ಇಲ್ಲಿನ ದೇವಾಲಯಗಳನ್ನು ಅಂದಿನ ವಿಜಯನಗರ  ದೊರೆಗಳು ನಿರ್ಮಾಣ ಮಾಡಿಡಿದ್ದು ಬೇಲೂರು ಹಳೇಬೀಡು ಶ್ರವಣಬೆಳಗೊಳ ಪ್ರವಾಸಿ ಧಾರ್ಮಿಕ ಕ್ಷೇತ್ರದಂತೆ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು. ದೇವಾಲಯ, ಕಲ್ಯಾಣಿ ಹಾಗೂ ಕೆರೆಗಳ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡಬೇಕು ಎಂದರು.

ಸ್ಮಾರಕಗಳ ಸಂರಕ್ಷಣಾ ಜಾಗೃತಿ ಅಭಿಯಾನಕ್ಕೆ ಗ್ರಾಮದ ಪುರವರ್ಗ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿ,  ಗ್ರಾಮದಲ್ಲಿರುವ  ದೇವಾಲಯಗಳ ಸಂರಕ್ಷಣೆಗೆ ಗ್ರಾಮಸ್ಥರು ಮುಂದಾಗಬೇಕು.  ಸರ್ಕಾರ ಪ್ರವಾಸಿ ಕ್ಷೇತ್ರವನ್ನಾಗಿ ಘೋಷಣೆ ಮಾಡಿ, ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿದರು.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಜೆ ಸೋಮನಾಥ್ ಮಾತನಾಡಿದರು. ದೇವಾಲಯ ಸಮಿತಿ ಅಧ್ಯಕ್ಷೆ ಛಾಯಾ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಹದೇವಮ್ಮ ಶಂಕರ್, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಎನ್ಎಸ್ ಲಕ್ಷ್ಮಣ್, ಅರ್ಚಕ ರಾಜು, ಪ್ರಾಧ್ಯಾಪಕರಾದಗೋಪಾಲ್, ಬಸವಗೌಡ, ಲಿಂಗಮೂರ್ತಿ, ಪ್ರಮುಖರಾದ ಹೂವಿನಹಳ್ಳಿ ರಮೇಶ್, ಶ್ರೀಧರ್ ಬಾಬು, ಪ್ರಬಣ್ಣ,   ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.