ನುಗ್ಗೇಹಳ್ಳಿ: ಹೋಬಳಿಯ ತಗಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಕೆ.ಪಿ. ಕುಮಾರ್ ಅವಿರೋಧ ಆಯ್ಕೆಯಾದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಹೇಮರಾಜ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ಕೆ.ಪಿ. ಕುಮಾರ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದೆ ಇದ್ದಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಹರೀಶ್ ಘೋಷಿಸಿದರು. ನೂತನ ಅಧ್ಯಕ್ಷ ಕೆ.ಪಿ. ಕುಮಾರ್ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ಅಭಿನಂದಿಸಿದರು.
‘ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ನೂತನ ಅಧ್ಯಕ್ಷರು ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ನರೇಗಾ ಯೋಜನೆ ಮೂಲಕ ರಸ್ತೆ ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವಚ್ಛತೆಗೂ ಹೆಚ್ಚಿನ ಗಮನ ಹರಿಸಬೇಕು’ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.
ತಾ.ಪಂ. ಮಾಜಿ ಸದಸ್ಯ ಓಬಳಾಪುರ ಬಸವರಾಜ್, ಮುಖಂಡರಾದ ಕಲ್ಲೇ ಸೋಮನಹಳ್ಳಿ ತಮ್ಮಯಣ್ಣ, ತಗಡೂರು ಬಸವರಾಜ್, ಗ್ರಾ.ಪಂ. ಉಪಾಧ್ಯಕ್ಷೆ ಚಂದ್ರಮ್ಮ ಶಂಕರ್, ಸದಸ್ಯರಾದ ಮಹಾಲಿಂಗೇಗೌಡ, ಕೆ.ಜೆ. ಶಂಕರ್, ಮಂಜುಳಮ್ಮ, ಸುಕನ್ಯಾ, ರೇಖಾ ಮಂಜ ಬೋವಿ, ಪಿಡಿಒ ಜ್ಯೋತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.