ADVERTISEMENT

ಹಾಸನ: 16 ಸಾವಿರ ದಾಟಿದ ಗುಣಮುಖರ ಸಂಖ್ಯೆ

448 ಜನರಿಗೆ ಸೋಂಕು ದೃಢ, ಮತ್ತೆ 2 ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 15:42 IST
Last Updated 10 ಅಕ್ಟೋಬರ್ 2020, 15:42 IST
   

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 448 ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 20,811ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮತ್ತೆ ಇಬ್ಬರು ಮೃತರಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 372 ತಲುಪಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆಲೂರು ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸಿಲ್ಲ.

4,110 ಸೋಂಕಿತರು ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂ ಐಸೂಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬಿಡುಗಡೆಯಾದ 425 ಜನ ಸೇರಿ ಈ ವರೆಗೆ 16,329 ಮಂದಿ ಚೇತರಿಸಿಕೊಂಡಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 43 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಹೊಸದಾಗಿ ಅರಸೀಕೆರೆ 39, ಚನ್ನರಾಯಪಟ್ಟಣ 50, ಆಲೂರು 17, ಹಾಸನ 228, ಹೊಳೆನರಸೀಪುರ 40, ಅರಕಲಗೂಡು 30, ಬೇಲೂರು 24, ಸಕಲೇಶಪುರ 19 ಹಾಗೂ ಇತರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.