ADVERTISEMENT

ದ್ವಿಶತಕ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 15:17 IST
Last Updated 16 ಏಪ್ರಿಲ್ 2021, 15:17 IST

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ 241 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 31,379ಕ್ಕೆ ಏರಿಕೆಯಾಗಿದೆ.‌

29,524 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, 1368 ಸಕ್ರಿಯ ಪ್ರಕರಣಗಳ ಪೈಕಿ 25 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೋವಿಡ್‌ ಕಾಯಿಲೆಗೆ ಇಬ್ಬರು ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 487 ತಲುಪಿದೆ.

ಹೊಸದಾಗಿ ಆಲೂರು 11, ಅರಕಲಗೂಡು 8, ಅರಸೀಕೆರೆ 29, ಬೇಲೂರು 10, ಚನ್ನರಾಯಪಟ್ಟಣ 41, ಹಾಸನ 82, ಹೊಳೆನರಸೀಪುರ 29, ಸಕಲೇಶಪುರ 27, ಇತರೆ ಜಿಲ್ಲೆ 4 ಮಂದಿಗೆ ಕೊರನಾ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.