ಜಾವಗಲ್: ಗ್ರಾಮದ ಕೃಷಿ ಪರಿಕರ ಮಾರಾಟ ಮಳಿಗೆಗಳ ಮೇಲೆ ಜಿಲ್ಲಾ ಕೃಷಿ ಜಾಗೃತ ಕೋಶದ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರ ಹಾಗೂ ಕೀಟನಾಶಕಗಳನ್ನು ವಶಪಡಿಸಿಕೊಂಡರು.
ಅಧಿಕಾರಿಗಳು ಜಾವಗಲ್ ಹಾಗೂ ಹಳೇಬೀಡು ಹೋಬಳಿಯ ಮಳಿಗೆಗಳಲ್ಲಿ ಇಲಾಖೆ ಅನುಮತಿ ಇಲ್ಲದೆ ರಸಗೊಬ್ಬರ, ಕೀಟನಾಶಕ, ಬಿತ್ತನೆ ಬೀಜ, ಕೃಷಿ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಂದ ಕೀಟನಾಶಕ ವಶಪಡಿಸಿಕೊಂಡರು. ಜೊತೆಗೆ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಾವಗಲ್ ಗ್ರಾಮದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ.ಡಿ.ಜೆ.ಸುಬ್ರಹ್ಮಣ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಜಾಗೃತ ಕೋಶದ ಸಹಾಯಕ ನಿರ್ದೇಶಕ ತೀರ್ಥಪ್ರಸಾದ್ ಮತ್ತು ಯೋಗಾನಂದ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.