ADVERTISEMENT

ಹಾಸನ: ಒಂದು ಟನ್‌ ಗೋಮಾಂಸ ವಶ

ಅನಧಿಕೃತ ಕಸಾಯಿಖಾನೆಗಳ ವಿರುದ್ದ ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 15:02 IST
Last Updated 27 ಫೆಬ್ರುವರಿ 2021, 15:02 IST
ಅರಸೀಕೆರೆಯಲ್ಲಿ ಕಸಾಯಿಖಾನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಸಂಗ್ರಹಿಸಿದ್ದ ದನದ ಮೂಳೆಗಳು.
ಅರಸೀಕೆರೆಯಲ್ಲಿ ಕಸಾಯಿಖಾನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಸಂಗ್ರಹಿಸಿದ್ದ ದನದ ಮೂಳೆಗಳು.   

ಹಾಸನ: ಗೌಗ್ಯಾನ ಫೌಂಡೇಷನ್ ಸ್ವಯಂ ಸೇವಕರ ಸಹಾಯದಿಂದ ಶನಿವಾರ ಅರಸೀಕೆರೆ ಪಟ್ಟಣದ ಕಸಾಯಿಖಾನೆಗಳ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಗೋಮಾಂಸ ಮತ್ತು ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.

ಅರಸಿಕೆರೆ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಸಂಗ್ರಹ ಮಾಡಿದ ಸುಮಾರು ಒಂದು ಟನ್‌ ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

‘ಅರಸಿಕೆರೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ 4 ರಿಂದ 5 ಕಸಾಯಿಖಾನೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.