ಹಾಸನ: ನಗರದ ಹಿಮ್ಸ್‌ನಲ್ಲಿ ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯುವಂತೆ ಮತ್ತು ಜಿಲ್ಲೆಯ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಒತ್ತಾಯಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸದಸ್ಯರು, ‘ನಗರದಲ್ಲಿ ಹಿಮ್ಸ್ ಆಡಳಿತ ವ್ಯಾಪ್ತಿಯಲ್ಲಿನ ನೂತನ ಕಟ್ಟಡ ನಿರ್ಮಿಸಲಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸಬೇಕು. ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ ಅನುಗುಣವಾಗಿ ಒದಗಿಸಬೇಕು’ ಎಂದು ಆಗ್ರಹಿಸಿದರು.
‘ನಮ್ಮ ಹಕ್ಕೊತ್ತಾಯದ ಭಾಗವಾಗಿ ಆಗಸ್ಟ್ 15ರಂದು ಹಿಮ್ಸ್ ನೂತನ ಆಸ್ಪತ್ರೆ ಕಟ್ಟಡದ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಆಗಸ್ಟ್ 14ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು’ ಎಂದರು.
ನಮ್ಮ 10 ಹಕ್ಕೊತ್ತಾಯಗಳನ್ನು ಅತ್ಯಂತ ತುರ್ತಾಗಿ, ಆದ್ಯತೆಯ ಮೇರೆಗೆ ಪರಿಗಣಿಸಬೇಕು. ಈ ಬೇಡಿಕೆಗಳು ಈಡೇರುವವರೆಗೆ ಹಾಗೂ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ ಜಿಲ್ಲೆಯ ಎಲ್ಲ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಬೇಡಿಕೆ ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ, ಮುಖಂಡರಾದ ಎಚ್.ಕೆ ಸಂದೇಶ್, ಎಂ.ಸೋಮಶೇಖರ್, ಟಿ.ಆರ್. ವಿಜಯ್ ಕುಮಾರ್, ರಾಜಶೇಖರ್, ಅಂಬುಗ ಮಲ್ಲೇಶ್, ಪೃಥ್ವಿ ಎಂ.ಜಿ., ಬಿ.ಸಿ ರಾಜೇಶ್, ಹರೀಶ್, ಇಂದ್ರೇಶ್, ರಾಜೇಶ್, ರವಿ ಬಸವಾಪುರ, ಮಂಜು ತೇಜೂರ್, ಸತೀಶ್ ಕೆ.ಎಂ., ಪುಟ್ಟರಾಜು ಇತರರು ಇದ್ದರು.
Quote - ಎಲ್ಲ ಶಿಕ್ಷಣ ಔದ್ಯೋಗಿಕ ಸಂಸ್ಥೆ ಘಟಕಗಳಲ್ಲಿ ಹಾಗೂ ಇಲಾಖೆಗಳಲ್ಲಿ ಮಾನಸಿಕ ಒತ್ತಡ ನಿರ್ವಹಣೆಗೆ ಅನುಕೂಲವಾಗುವಂತೆ ಕನಿಷ್ಠ ಒಬ್ಬರು ತಜ್ಞ ಆಪ್ತ ಸಮಾಲೋಚಕರನ್ನು ನೇಮಿಸಬೇಕು ಧರ್ಮೇಶ್ ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.