
ಅರಕಲಗೂಡು: ‘ಅತಿಯಾದ ರಾಸಾಯನಿಕಗಳ ಬಳಕೆಯಿಂದ ಭೂಮಿಯ ಫಲವತ್ತತೆ ಹಾಳಾಗುತ್ತದೆ. ರೈತರು ಜಾಗೃತಿ ವಹಿಸಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ’ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸೀಬಳ್ಳಿ ಯೋಗಣ್ಣ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕಿನ ಬಂಡಿ ಶೆಟ್ಟಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕೃಷಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಜೀವಾಮೃತವನ್ನು ರೈತರು ತಯಾರಿಸಿ ಕೃಷಿ ಬಳಕೆ ಮಾಡುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು. ಸಮಗ್ರ ಕೃಷಿ ಕೈಗೊಂಡಾಗ ಆರ್ಥಿಕ ಲಾಭಗಳಿಕೆ ಸಾಧ್ಯವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೈತರಿಗೆ ಉಪಯುಕ್ತವಾಗುವ ಹಲವು ಕಾರ್ಯಕ್ರಮ ಆಯೋಜಿಸುತ್ತಿದ್ದು ಇದರ ಉಪಯೋಗ ಪಡೆದುಕೊಳ್ಳಿ’ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೇಶ್, ಹರೀಶ್ ಮುಖಂಡರಾದ ಗಿಡ್ಡೆಗೌಡ, ರಾಜೇಗೌಡ, ಕೃಷಿ ಮೇಲ್ವಿಚಾರಕ ಸುನೀಲ್ ಕುಮಾರ್, ಒಕ್ಕೂಟದ ಅಧ್ಯಕ್ಷ ರಮೇಶ್. ಸೇವಾಪ್ರತಿನಿಧಿ ರೂಪಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.