ಹಾಸನ: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ (ಓರಿಯೆಂಟೇಶನ್) ಕಾರ್ಯಕ್ರಮವನ್ನು ನಗರದ ಬ್ರಿಲಿಯಂಟ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಡಾ.ಎಚ್.ಎಸ್. ಅನಿಲ್ ಕುಮಾರ್ ಮಾತನಾಡಿ, ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.
2024-25 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಅತಿಥಿಯಾಗಿದ್ದ ಉಪನ್ಯಾಸಕ ಪ್ರೊ.ಬಸವಕಿರಣ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಪಿಯುಸಿ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು. ಏಕಾಗ್ರತೆ, ಆಸಕ್ತಿ, ಜೀವನದ ಸಂಸ್ಕಾರ ಮುಂತಾದವುಗಳಿಂದ ಯಶಸ್ಸು ಸಾಧ್ಯ ಎಂಬುದನ್ನು ತಮ್ಮ ತಿಳಿಸಿದರು.
ಪ್ರಾಂಶುಪಾಲ ಪ್ರೊ.ಜವರಾಜೇಗೌಡ, ಉಪ ಪ್ರಾಂಶುಪಾಲೆ ಪುಷ್ಪಾ, ವ್ಯವಸ್ಥಾಪಕ ರಘುಕುಮಾರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.