ಬಾಣಾವರ: ಪಟ್ಟಣದ ಗುರುಕುಲ ಇಂಟರ್ ನ್ಯಾಷನಲ್ ಶಾಲೆ ಸಿಬಿಎಸ್‌ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಸತತ 14ನೇ ಬಾರಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದೆ. ಈ ಶಾಲೆಯು ಕಳೆದ 14 ವರ್ಷಗಳಿಂದಲೂ ಶೇ100 ಫಲಿತಾಂಶ ದಾಖಲಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ತಿಳಿಸಿದ್ದಾರೆ.
ವಿದ್ಯಾರ್ಥಿ ಅಕ್ಷಯ್ ಕುಮಾರ್ ಸಿಂಗ್ (ಶೇ 96.2) ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದು.35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅತ್ಯುನ್ನತ ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು ಹಾಗೂ ಉಳಿದವರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿ ರಾಜು ಸಿ ಜೆ, ಪ್ರಾಂಶುಪಾಲರಾದ ವಿಜಯ ಕುಮಾರ ಬಿ ವಿ ತಿಳಿಸಿದ್ದಾರೆ.
ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಾಲೆಯ ಶಿಕ್ಷಕವೃಂದ ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.