
ಪ್ರಜಾವಾಣಿ ವಾರ್ತೆ
ಕೊಣನೂರು: ರಾಮನಾಥಪುರ, ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು ಮುಂತಾದ ಕಡೆಗಳಲ್ಲಿ ಪರವಾನಗಿ ರಹಿತ ಬೆಳೆಗಾರರು ಬೆಳೆದಿರುವ ತಂಬಾಕಿನ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಶಾಸಕ ಎ. ಮಂಜು ತಿಳಿಸಿದರು.
ಸಮೀಪದ ರಾಮನಾಥಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರವಾನಗಿ ರಹಿತ ತಂಬಾಕು ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇತ್ತೀಚೆಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ವಂದಿಸಿದ ಸಚಿವರು ಈ ಬಗ್ಗೆ ಕೇಂದ್ರದ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ, ಪರವಾನಗಿ ರಹಿತ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವುದಾಗಿ ತಿಳಿಸಿದ್ದರು. ಅವರ ಪ್ರಯತ್ನದ ಫಲವಾಗಿ ರಾಮನಾಥಪುರ ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಿವಿಧ ತಂಬಾಕು ಮಾರುಕಟ್ಟೆಗಳಲ್ಲಿ ಪರವಾನಗಿ ರಹಿತ ತಂಬಾಕು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.