
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಸಮೀಪದ ಚಿಕ್ಕಾರಹಳ್ಳಿ ಗೋಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಗುರುವಾರ ಹಸಿ ಅಡಿಕೆ ಸಾಗಿಸುತ್ತಿದ್ದ ಬೊಲೆರೊ ವಾಹನದ ಟೈರ್ ಸಿಡಿದು, ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟರು.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ತಂಗ್ಲಿ ಗ್ರಾಮದ ಶಬ್ಬೀರ್ (55), ತಿಮ್ಮಣ್ಣ (53), ಸಂಜಯ್ (45) ಮೃತರು. ಗಂಭೀರವಾಗಿ ಗಾಯಗೊಂಡಿರುವ ಹಾಸನದ ನೌಶಾದ್ ಅವರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.